ನವದೆಹಲಿ: ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ ಎಂದು ಹರಿಯಾಣದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಇಂದು (ಶನಿವಾರ) ಹರಿಯಾಣ ರಾಜ್ಯದ 90 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 5ರ ವರೆಗೆ ನಡೆಯಲಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ಹರಿಯಾಣ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಈ ಪವಿತ್ರ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಲು ಎಲ್ಲಾ ಮತದಾರರಿಗೆ ವಿನಂತಿಸುತ್ತೇನೆ ಮತ್ತು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ ಎಂದು ಕೋರುತೇನೆ ಎಂದಿದ್ದಾರೆ.

ಹಾಗೂ ಮೊದಲ ಬಾರಿಗೆ ಮತದಾನ ಮಾಡುವ ರಾಜ್ಯದ ಎಲ್ಲಾ ಯುವ ಸ್ನೇಹಿತರಿಗೆ ನನ್ನ ವಿಶೇಷ ಶುಭಾಶಯಗಳು ಎಂದು ಮೋದಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ, ಕುಸ್ತಿಪಟು ವಿನೇಶ್ ಫೋಗಟ್, ಜೆಜೆಪಿಯ ನಾಯಕ ದುಷ್ಯಂತ್ ಚೌಟಾಲಾ ಸೇರಿದಂತೆ ಒಟ್ಟು 1,031 ಅಭ್ಯರ್ಥಿಗಳ ಭವಿಷ್ಯವನ್ನು 2 ಕೋಟಿಗೂ ಅಧಿಕ ಮತದಾರರು ನಿರ್ಣಯಿಸಲಿದ್ದಾರೆ.

ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಪಡೆಯುವ ಉಮೇದಿನಲ್ಲಿ ಬಿಜೆಪಿ ಇದ್ದರೆ, 10 ವರ್ಷಗಳ ಬಳಿಕ ಸರ್ಕಾರ ರಚಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಒಟ್ಟು 2.04 ಕೋಟಿ ಮಂದಿ ಮತದಾರಾಗಿ ನೋಂದಾಯಿಸಿಕೊಂಡಿದ್ದು, ಇದರಲ್ಲಿ 8,821 ಶತಾಯುಷಿಗಳೂ ಸೇರಿದ್ದಾರೆ ಎಂದು ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ ಪಂಕಜ್ ಅಗರ್‌ವಾಲ್ ಮಾಹಿತಿ ನೀಡಿದ್ದಾರೆ.

ಒಟ್ಟು 1,031 ಅಭ್ಯರ್ಥಿಗಳ ಪೈಕಿ 101 ಮಹಿಳೆಯರಿದ್ದು, 464 ಮಂದಿ ಸ್ವತಂತ್ರ್ಯವಾಗಿ ಸ್ಪರ್ಧಿಸುತ್ತಿದ್ದಾರೆ. 20,632 ಮತಗಟ್ಟಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.