ಗುರುಗ್ರಾಮ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯ ಎಂದು ಹೇಳಿಕೊಂಡಿರುವ ವ್ಯಕ್ತಿಯಿಂದ ತನಗೆ ಬೆದರಿಕೆ ಕರೆ ಬಂದಿದೆ ಎಂದು ಶಿವಸೇನಾದ ಹರಿಯಾಣ ಉಸ್ತುವಾರಿ ವಿಕ್ರಮ್ ಸಿಂಗ್ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಕರೆ ಮಾಡಿದ ವ್ಯಕ್ತಿ ತನ್ನನ್ನು ರೋಹಿತ್ ಗೋದಾರ ಎಂದು ಪರಿಚಯಿಸಿಕೊಂಡಿದ್ದು, ವ್ಯವಹಾರದಲ್ಲಿ ಪಾಲು ನೀಡುವಂತೆ ಕೇಳಿದ್ದಾನೆ ಎಂದು ವಿಕ್ರಮ್ ಸಿಂಗ್ ಆನ್ಲೈನ್ನಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

'ನವೆಂಬರ್ 11 ರಂದು ಮಧ್ಯಾಹ್ನ 3 ಗಂಟೆಗೆ ವಾಟ್ಸಾಪ್ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ತಾನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯ ಎಂದು ಹೇಳಿಕೊಂಡಿದ್ದು, ನನ್ನ ಅವರ ವ್ಯವಹಾರದಲ್ಲಿ ಪಾಲು ಕೇಳಿದ್ದಾನೆ. ಒಂದು ದಿನದ ಸಮಯ ನೀಡಿದ್ದು, ಪಾಲು ನೀಡದಿದ್ದರೆ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ' ಎಂದು ವಿಕ್ರಮ್ ಸಿಂಗ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ಬಿಷ್ಣೋಯಿ ಗ್ಯಾಂಗ್ನಿಂದ ಪಪ್ಪು ಯಾದವ್ಗೆ ಬೆದರಿಕೆ ಕರೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.