ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಇತರ ನಾಲ್ವರು ನಾಯಕರಿಗೆ ಹಾಥರಸ್ ಭೇಟಿಗೆ ಅವಕಾಶ ನೀಡಲಾಗಿದೆ ಎಂದು ನೊಯ್ಡಾ ಪೊಲೀಸರು ತಿಳಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ದೆಹಲಿ–ನೊಯ್ಡಾ ಹೆದ್ದಾರಿ ತಲುಪಿದ್ದಾರೆ. ಹೆದ್ದಾರಿಯಲ್ಲಿ ಉತ್ತರ ಪ್ರದೇಶ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:ಹಾಥರಸ್ ಅತ್ಯಾಚಾರ ಪ್ರಕರಣ: ವಾರಾಣಸಿಯಲ್ಲಿ ಸ್ಮೃತಿ ಇರಾನಿ ಕಾರು ತಡೆದು ಆಕ್ರೋಶ

ಅತ್ಯಾಚಾರ ಸಂಸತ್ರಸ್ತೆಯ ಕುಟುಂದವರಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಪತ್ರಕರ್ತರು, ರಾಜಕಾರಣಿಗಳು ಹಾಥರಸ್ ಪ್ರವೇಶಿಸದಂತೆ ಶುಕ್ರವಾರ ಅಲ್ಲಿನ ಆಡಳಿತ ನಿರ್ಬಂಧ ಹೇರಿತ್ತು. ಶನಿವಾರ ಬೆಳಿಗ್ಗೆ ಮಾಧ್ಯಮದವರಿಗೆ ಅವಕಾಶ ನೀಡಲಾಗಿದೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಹಾಥರಸ್ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು.

ಇದನ್ನೂ ಓದಿ:ರಾಹುಲ್ ಗಾಂಧಿ ಹಾಥರಸ್ ಭೇಟಿ ರಾಜಕೀಯ ಪ್ರೇರಿತ: ಸ್ಮೃತಿ ಇರಾನಿ ಟೀಕೆ

ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.