ಸೋಮವಾರ, 8 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Hathras stampede: 90ಕ್ಕೂ ಹೆಚ್ಚು ಹೇಳಿಕೆ ದಾಖಲಿಸಿದ ಎಸ್‌ಐಟಿ

Published 5 ಜುಲೈ 2024, 10:21 IST
Last Updated 5 ಜುಲೈ 2024, 10:21 IST
ಅಕ್ಷರ ಗಾತ್ರ

ಹಾಥರಸ್‌ (ಉತ್ತರ ಪ್ರದೇಶ): ಹಾಥರಸ್‌ ಕಾಲ್ತುಳಿತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಈವರೆಗೆ 90ಕ್ಕೂ ಹೆಚ್ಚು ಹೇಳಿಕೆಗಳನ್ನು ದಾಖಲಿಸಿದೆ ಎಂದು ಸಮಿತಿಯ ಮುಖ್ಯಸ್ಥ ಅನುಪಮ್ ಕುಲಶ್ರೇಷ್ಠ ಶುಕ್ರವಾರ ತಿಳಿಸಿದ್ದಾರೆ.

ಜುಲೈ 2ರಂದು ಹಾಥರಸ್‌ನ ಫೂಲರಾಯ್‌ ಗ್ರಾಮದಲ್ಲಿ ನಡೆದ ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 121 ಮಂದಿ ಮೃತಪಟ್ಟಿದ್ದರು. ದುರಂತದ ಬಗ್ಗೆ ತನಿಖೆ ನಡೆಸಿ, ವಿವರವಾದ ವರದಿ ಸಲ್ಲಿಸಲು ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಆಗ್ರಾ ವಲಯ) ಅನುಪಮ್ ಕುಲಶ್ರೇಷ್ಠ ಅವರು ಸಮಿತಿಯ ನೇತೃತ್ವ ವಹಿಸಿದ್ದಾರೆ.

ಹಾಥರಸ್‌ನಲ್ಲಿ ಪಿಟಿಐನೊಂದಿಗೆ ಮಾತನಾಡಿದ ಅವರು, 'ಇದುವರೆಗೆ 90 ಹೇಳಿಕೆಗಳನ್ನು ದಾಖಲಿಸಲಾಗಿದೆ. ಸದ್ಯ ಪ್ರಾಥಮಿಕ ವರದಿಯನ್ನು ಸಲ್ಲಿಸಲಾಗಿದೆ. ಹೆಚ್ಚಿನ ಸಾಕ್ಷ್ಯಾಧಾರಗಳು ಸಿಕ್ಕಿರುವುದರಿಂದ ತನಿಖೆ ಮುಂದುವರಿದಿದೆ' ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT