ಪತ್ತನಂತಿಟ್ಟ: ‘ಕೇರಳದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ನಾನು ಯಾವುದೇ ಘೋಷಣೆ ಮಾಡಿರಲಿಲ್ಲ. ಬದಲಿಗೆ, ಮೆಟ್ರೊಮ್ಯಾನ್ ಶ್ರೀಧರನ್ ಅವರು ಪಕ್ಷದ ನೇತೃತ್ವ ವಹಿಸುವುದನ್ನು ಪಕ್ಷದ ಕಾರ್ಯಕರ್ತರು ಬಯಸುತ್ತಾರೆ ಎಂದು ಹೇಳಿದ್ದೆ’ ಎಂದು ಬಿಜೆಪಿಯ ಕೇರಳ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

‘ರಾಜ್ಯದಲ್ಲಿ ನಾನು ಪಕ್ಷದ ಮುಖ್ಯಸ್ಥ. ನಾನು ಏನು ಹೇಳಿದ್ದೇನೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಶ್ರೀಧರನ್ ಅವರ ನಾಯಕತ್ವವನ್ನು ರಾಜ್ಯದ ಜನರು ಬಯಸುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂಬುದನ್ನು ಬಿಟ್ಟು, ಬೇರೇನನ್ನೂ ನಾನು ಗುರುವಾರ ಹೇಳಿರಲಿಲ್ಲ. ಮಾಧ್ಯಮಗಳು ನನ್ನ ಮಾತನ್ನು ತಪ್ಪಾಗಿ ಅರ್ಥೈಸಿವೆ. ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆಯ ವಿಚಾರವನ್ನು ಪಕ್ಷದ ಕೇಂದ್ರ ನಾಯಕತ್ವ ಮಾತ್ರ ನಿರ್ಧರಿಸಬಲ್ಲದು’ ಎಂದು ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುತ್ತಾ ಹೇಳಿದ್ದಾರೆ.

‘ಶ್ರೀಧರನ್ ಅವರು ಕೇರಳದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುತ್ತಾರೆ’ ಎಂದು ಕೇಂದ್ರದ ಸಚಿವ ವಿ. ಮುರಳೀಧರನ್ ಅವರು ಗುರುವಾರ ಟ್ವೀಟ್ ಮಾಡಿದ್ದರು. ಆದರೆ ಸ್ವಲ್ಪ ಸಮಯದಲ್ಲೇ ಆ ಟ್ವೀಟ್ ಅನ್ನು ಅಳಿಸಿಹಾಕಿದ್ದರು. ಇದಾದ ನಂತರ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.