ಶ್ರೀನಗರ: ಜಮ್ಮು – ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಉಗ್ರರಿಗೆ ಹಣ ಒದಗಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಶನಿವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಬಂಧಿತ ಆರೋಪಿಯನ್ನು ಮೊಹಮ್ಮದ್ ಯಾಸಿನ್ ಎಂದು ಗುರುತಿಸಲಾಗಿದೆ. ಆತ ಹವಾಲಾ ಮಾರ್ಗಗಳ ಮೂಲಕ ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ಸಂದಾಯ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಲಷ್ಕರ್ ಎ–ತಯಬಾ(ಎಲ್ಇಟಿ) ಮತ್ತು ಅಲ್-ಬದ್ರ್ ಭಯೋತ್ಪಾದಕ ಸಂಘಟನೆಗಳಿಗೆ ಯಾಸಿನ್ ಹಣ ರವಾನಿಸಿರುವುದು ದೃಢಪಟ್ಟಿದೆ ಎಂದು ದೆಹಲಿ ಪೊಲೀಸ್ ವಿಶೇಷ ಪೊಲೀಸ್ ಆಯುಕ್ತ ಎಚ್ಜಿಎಸ್ ಧಲಿವಾಲ್ ತಿಳಿಸಿದ್ದಾರೆ.

ಮೊಹಮ್ಮದ್ ಯಾಸಿನ್ ದೆಹಲಿಯ ಟರ್ಕ್ಮನ್ ಗೇಟ್ ಪ್ರದೇಶದಲ್ಲಿ ವಾಸವಾಗಿದ್ದು, ಗಾರ್ಮೆಂಟ್ಸ್ ವ್ಯವಹಾರ ನಡೆಸುತ್ತಿದ್ದ. ಕಳೆದ ವಾರ ಕಾಶ್ಮೀರದಲ್ಲಿರುವ ಅಬ್ದುಲ್ ಹಮೀದ್ ಮೀರ್ಎಂಬ ಭಯೋತ್ಪಾದಕನಿಗೆ ಆತ ಸುಮಾರು ₹10 ಲಕ್ಷ ಹಣ ಕಳುಹಿಸಿದ್ದ. ಈ ಸಂಬಂಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೀರ್ನನ್ನು ಬಂಧಿಸಿದ್ದಾರೆ. ಆತನ ವಿಚಾರಣೆಯ ನಂತರ, ಯಾಸಿನ್ನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಆತನಿಂದ ₹7 ಲಕ್ಷ ನಗದು ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಗುಜರಾತ್ ಮತ್ತು ಮುಂಬೈಗೆ ಹವಾಲಾ ಹಣ ರವಾನೆಯಾಗುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.