ನವದೆಹಲಿ: ಭ್ರಷ್ಟಾಚಾರ, ಕಪ್ಪುಹಣ ಮತ್ತು ಬೇನಾಮಿ ವಹಿವಾಟುಗಳನ್ನು ತಡೆಯುವ ಸಂಬಂಧ ಜನರ ಸ್ಥಿರ ಮತ್ತು ಚರ ಆಸ್ತಿಯ ದಾಖಲೆಗಳನ್ನು ಅವರ ಆಧಾರ್ ಸಂಖ್ಯೆಗಳೊಂದಿಗೆ ಜೋಡಿಸುವ ಕುರಿತು ಸಲ್ಲಿಕೆಯಾಗಿರುವ ಅರ್ಜಿಯನ್ನು ಪರಿಶೀಲಿಸುವಂತೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

‘ಇದೆಲ್ಲ ನೀತಿ ನಿರೂಪಕ ವಿಷಯಗಳಾಗಿದ್ದು, ಹೀಗೇ ಮಾಡಬೇಕು ಎಂದು ನ್ಯಾಯಾಲಯಗಳು ಸರ್ಕಾರಕ್ಕೆ ಸೂಚಿಸಲು ಆಗುವುದಿಲ್ಲ’ ಎಂದು ನ್ಯಾಯಮೂರ್ತಿಗಳಾದ ರಾಜೀವ್ ಶಕ್ದೇರ್, ಗಿರೀಶ್ ಕತ್ಪಾಲಿಯಾ ಅವರ ಪೀಠ ಹೇಳಿತು.

ಈ ಅರ್ಜಿಯ ಕುರಿತು ಮೂರು ತಿಂಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಪೀಠ ಕೇಂದ್ರ ಸರ್ಕಾರಕ್ಕೆ ತಿಳಿಸಿತು. ಈ ಕುರಿತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.