ನವದೆಹಲಿ: ಆ್ಯಸಿಡ್ ದಾಳಿಯಿಂದ ದೃಷ್ಟಿ ಕಳೆದುಕೊಂಡ ಇಬ್ಬರು ಸಂತ್ರಸ್ತೆಯರಿಗೆ ತಲಾ ₹5 ಲಕ್ಷ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಮಂಗಳವಾರ ಅಧಿಕಾರಿಗಳಿಗೆ ಸೂಚಿಸಿತು.

2009ರಲ್ಲಿ ಇಬ್ಬರು ಮಹಿಳೆಯರ ಮೇಲೆ ಆ್ಯಸಿಡ್ ಎರಚಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಂತ್ರಸ್ತೆಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಈ ನಿರ್ದೇಶನ ನೀಡಿತು.

ಇದೇ ವೇಳೆ, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು, ಆರೋಪಿಗಳ ಮೇಲಿನ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿತು.

ಹಾಗೆಯೇ, ಸಂತ್ರಸ್ತೆಯರಿಗೆ ದೆಹಲಿ ಸರ್ಕಾರದ ಯಾವುದಾದರೂ ಇಲಾಖೆಯಲ್ಲಿ ಉದ್ಯೋಗ ನೀಡಬಹುದೆ ಎಂಬ ಬಗ್ಗೆ ಪರಿಶೀಲಿಸುವಂತೆ ದೆಹಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚನೆ ನೀಡಿತು.

ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈತ್ ಮತ್ತು ನೀನಾ ಬನ್ಸಾಲ್ ಕೃಷ್ಣ ಅವರನ್ನು ಒಳಗೊಂಡ ನ್ಯಾಯಪೀಠವು, ‘ಆ್ಯಸಿಡ್ ದಾಳಿಯಿಂದಾಗಿ ಸಂತ್ರಸ್ತೆಯರು ಅತೀವ ನೋವು ಅನುಭವಿಸಿದ್ದಾರೆ. ಕಣ್ಣುಗಳ ದೃಷ್ಟಿ ಕಳೆದುಕೊಂಡಿರುವುದು ಮಾತ್ರವಲ್ಲದೆ ವಿರೂಪಗೊಂಡಿದ್ದಾರೆ, ಜೀವಮಾನವಿಡೀ ಅಂಗವೈಕಲ್ಯದೊಂದಿಗೆ ಬೇರೆಯವರನ್ನು ಅವಲಂಬಿಸಿ ಬದುಕಬೇಕಾಗಿದೆ’ ಎಂದು ಹೇಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.