ನವದೆಹಲಿ: ಹಣಕಾಸುಅಕ್ರಮ ಮತ್ತು ವಂಚನೆ ಆರೋಪದಡಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ನಾಯಕಮಿಲಿಂದ್ ದಿಯೋರಾ,ಯೆಸ್ ಬ್ಯಾಂಕ್ ಸಹ–ಸಂಸ್ಥಾಪಕ ರಾಣಾ ಕಪೂರ್ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಿಬಿಐ ಮತ್ತು ಇ.ಡಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಚಿತ್ರ ಕಲಾಕೃತಿ ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದೆ. ಆದರೆ, ಪ್ರಿಯಾಂಕಾ ಗಾಂಧಿ ಅವರು ಇದನ್ನುರಾಣಾ ಕಪೂರ್‌ಗೆ ₹2 ಕೋಟಿಗೆ ಮಾರಾಟ ಮಾಡಿದ್ದಾರೆಎಂದು ಆರೋಪಿಸಿ ಸರ್ಕಾರೇತರ ಸಂಸ್ಥೆ ಅಖಿಲ ಭಾರತೀಯ ಶಾಂತಿ ಪ್ರತಿಷ್ಠಾನವು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಭು ಬಾಖ್ರು ಅವರು ಅರ್ಜಿಯನ್ನು ಅಂಗೀಕರಿಸಲು ನಿರಾಕರಿಸಿದ್ದಾರೆ.

ರಾಣಾ ಕಪೂರ್ ವಿರುದ್ಧಯೆಸ್ ಬ್ಯಾಂಕ್ ಹಗರಣದ ವಿಚಾರಣೆ ಇನ್ನೂ ನಡೆಯುತ್ತಿದೆ. ಹಾಗಾಗಿ ಸಂಬಂಧಪಟ್ಟ ಸ್ಥಳೀಯ ನ್ಯಾಯಲದಲ್ಲಿ ಅರ್ಜಿ ಸಲ್ಲಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಡಿ ಬಂಧನದಲ್ಲಿರುವ ರಾಣಾ ಕಪೂರ್ ಅವರ ಮೇಲೆಮಿಲಿಂದ್ ದಿಯೋರಾ ಅವರು ರಾಜೀವ್ ಗಾಂಧಿ ಅವರ ಚಿತ್ರಕಲಾಕೃತಿ ಖರೀದಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.