ನವದೆಹಲಿ (ಪಿಟಿಐ): ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಆರೋಪಿಗಳಾಗಿರುವ ಐಎನ್ಎಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕೆಳಹಂತದ ಕೋರ್ಟ್ನ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯ ಅವಧಿಯನ್ನು ವಿಸ್ತರಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿ ಮತ್ತು ಅವರ ಪರ ವಕೀಲರಿಂದ ಪ್ರಕರಣದ ದಾಖಲೆಗಳ ಪರಿಶೀಲನೆ ಕುರಿತು ಕೆಳಹಂತದ ಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು, ಈ ಬಗ್ಗೆ ಸುಪ್ರೀಂ ಕೋರ್ಟ್ನ ಸೂಚನೆ ಪರಿಶೀಲಿಸಲು ಸಿಬಿಐ ಪರ ವಕೀಲರಿಗೆ ಸಮಯಾವಕಾಶ ನೀಡಿದರು.

ಸುಪ್ರೀಂ ಕೋರ್ಟ್ ವಿಚಾರಣೆ ಕುರಿತ ಅಂಶವನ್ನು ಇತ್ಯರ್ಥಪಡಿಸಿದೆ. ಕ್ರಿಮಿನಲ್ ವಿಚಾರಣೆಗೆ ಸಂಬಂಧಿಸಿದ ಲೋಪ ಸರಿಪಡಿಸಿ ಕಾಯ್ದೆಯನ್ನು ರೂಪಿಸಲು ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ ಎಂದು ನ್ಯಾಯಮೂರ್ತಿ ತಿಳಿಸಿದರು. ಪ್ರಕರಣದ ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.