ಮುಂಬೈ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಆದರೆ ಈ ಆದೇಶವನ್ನು ಅಕ್ಟೋಬರ್ 13ರ ವರೆಗೆ ಕೋರ್ಟ್ ತಡೆ ಹಿಡಿದಿದೆ. ಅಲ್ಲಿವ ವರೆಗೆ ಜಾರಿ ನಿರ್ದೇಶನಾಲಯಕ್ಕೆ ಜಾಮೀನು ವಿರೋಧಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭ ಗೃಹ ಸಚಿವರಾಗಿದ್ದ ಅನಿಲ್ ದೇಶ್ಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ 2021ರ ನವೆಂಬರ್ನಲ್ಲಿ ಮೊದಲಿಗೆ ಜಾರಿ ನಿರ್ದೇಶನಾಲಯ, ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು.

ಅನಿಲ್ ದೇಶ್ಮುಖ್ ಅವರಿಗೆ ಜಾಮೀನು ನೀಡಲಾಗಿದೆ. ₹ 1 ಲಕ್ಷ ಮುಚ್ಚಳಿಕೆಯೊಂದಿಗೆ ದೇಶ್ಮುಖ್ ಅವರನ್ನು ಬಿಡುಗಡೆ ಮಾಡಬಹುದು. ಆದರೆ ಜಾಮೀನು ಆದೇಶವನ್ನು ಅಕ್ಟೋಬರ್ 13ರ ವರೆಗೆ ತಡೆ ಹಿಡಿಯಲಾಗಿದೆ ಎಂದು ಹೆಚ್ಚುವರಿ ಸಾಲಿಟರ್ ಜೆನರಲ್ ಅನಿಲ್ ಸಿಂಗ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ನಲ್ಲಿ ಅನಿಲ್ ಅವರಿಗೆ ನೀಡಿರುವ ಜಾಮೀನು ಆದೇಶವನ್ನು ಪ್ರಶ್ನಿಸಬಹುದು ಎಂದು ಅನಿಲ್ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.