ನವದೆಹಲಿ: ಡಿಜಿಟಲ್ ಸುದ್ದಿ ಮಾಧ್ಯಮವನ್ನು ನಿಯಂತ್ರಿಸುವ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಡೆ ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಈ ಹಂತದಲ್ಲಿ ತಡೆ ಆದೇಶ ನೀಡಲಾಗದು ಎಂದು ಸ್ಪಷ್ಟಪಡಿಸಿದೆ.

ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, 2021ಕ್ಕೆ ತಡೆ ನೀಡುವಂತೆ ಕೋರಿ ಫೌಂಡೇಶನ್ ಫಾರ್ ಇಂಡಿಪೆಂಡೆಂಟ್ ಜರ್ನಲಿಸಂ, ದಿ ವೈರ್, ಕ್ವಿಂಟ್ ಡಿಜಿಟಲ್ ಮೀಡಿಯಾ ಲಿಮಿಟೆಡ್ ಮತ್ತು ಆಲ್ಟ್ ನ್ಯೂಸ್ನ ಪ್ರವರ್ತಕ ಸಂಸ್ಥೆ ಪ್ರಾವ್ಡಾ ಮೀಡಿಯಾ ಫೌಂಡೇಶನ್ ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದವು. ನಿಯಮಗಳನ್ನು ಅನುಸರಿಸದಿದ್ದರೆ ಬಲವಂತದ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

‘ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಅಳವಡಿಸಿಕೊಳ್ಳಬೇಕೆಂದು ಸೂಚಿಸಿ ಕೇಂದ್ರ ಸರ್ಕಾರ ಈ ಕಂಪನಿಗಳಿಗೆ ನೋಟಿಸ್ ನೀಡಿತ್ತು. ಒಂದೊಮ್ಮೆ ಅನುಸರಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿತ್ತು. ಹೀಗಾಗಿ ನಿಯಮಗಳಿಗೆ ತಡೆ ನೀಡುವಂತೆ ದೆಹಲಿ ಹೈಕೋರ್ಟ್ನಲ್ಲಿ ಕಂಪನಿಗಳು ಅರ್ಜಿ ಸಲ್ಲಿಸಿದ್ದವು.

ನ್ಯಾಯಮೂರ್ತಿಗಳಾದ ಸಿ. ಹರಿಶಂಕರ್ ಮತ್ತು ಸುಬ್ರಮಣಿಯಂ ಪ್ರಸಾದ್ ಅವರ ಪೀಠವು ಅಧಿಸೂಚನೆ ಅನುಷ್ಠಾನಕ್ಕಾಗಿ ಮಾತ್ರ ನೋಟಿಸ್ ನೀಡಲಾಗಿದೆ ಎಂದು ತಿಳಿಸಿತು.

ಕಂಪನಿಗಳ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲೆ ನಿತ್ಯಾ ರಾಮಕೃಷ್ಣನ್ ಅವರು, ನ್ಯಾಯಾಲಯಗಳ ರಜೆ ಮುಗಿದ ಮೇಲೆ, ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಪೀಠವನ್ನು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.