ನವದೆಹಲಿ: ಚಲನಚಿತ್ರೋದ್ಯಮದ ವಿರುದ್ಧ ಬೇಜವಾಬ್ದಾರಿಯುತ, ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಬಾಲಿವುಡ್ನ ಪ್ರಮುಖ ನಿರ್ಮಾಪಕರು ಸಲ್ಲಿಸಿರುವ ಮನವಿ ಕುರಿತು ಪ್ರತಿಕ್ರಿಯೆ ನೀಡುವಂತೆ ರಿಪಬ್ಲಿಕ್ ಟಿವಿ ಮತ್ತು ಟೈಮ್ಸ್ ನೌ ಟಿವಿ ವಾಹಿನಿಗಳಿಗೆ ದೆಹಲಿ ಹೈಕೋರ್ಟ್ ಸೂಚಿಸಿದೆ.

ಚಾನೆಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ವಿಷಯಗಳನ್ನು ಪ್ರಸಾರ ಮಾಡದಂತೆ ನೋಡಿಕೊಳ್ಳಬೇಕು ಎಂದು ಎಜಿಆರ್ ಔಟ್ಲಿಯರ್ ಮಿಡಿಯಾ ಪ್ರೈವೆಟ್ ಲಿಮಿಟೆಡ್(ರಿಪಬ್ಲಿಕ್ ಟಿವಿ) ಮತ್ತು ಬೆನೆಟ್ ಕೋಲ್ಮನ್ ಮತ್ತು ಕಂಪನಿ ಲಿಮಿಟೆಡ್(ಟೈಮ್ಸ್ ಗ್ರೂಪ್) ಮಾಧ್ಯಮ ಸಂಸ್ಥೆಗಳಿಗೆ ನ್ಯಾಯಮೂರ್ತಿ ರಾಜೀವ್ ಶಖ್ಧೇರ್ ಅವರು ಸೂಚಿಸಿದ್ದಾರೆ.

ಈ ಬಗ್ಗೆ ಕಾರ್ಯಕ್ರಮದ ನೀತಿ ಸಂಹಿತೆಯನ್ನು ಅನುಸರಿಸುವುದಾಗಿ ಮಾಧ್ಯಮ ಸಂಸ್ಥೆಗಳ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ.

ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದ ಉದ್ಯಮಿಗಳ ಗೌಪ್ಯತೆ ಹಕ್ಕಿಗೆ ಚ್ಯುತಿ ತರದಂತೆ ಮಾಧ್ಯಮ ಸಂಸ್ಥೆಗಳು ನಡೆದುಕೊಳ್ಳಬೇಕು ಎಂದೂ ಬಾಲಿವುಡ್ನ ನಾಲ್ಕು ಇಂಡಸ್ಟ್ರಿಗಳು ಮತ್ತು 34 ನಿರ್ಮಾಪಕರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಾಲಿವುಡ್ ವಿರುದ್ಧ ಬೇಜವಾಬ್ದಾರಿ, ಅವಹೇಳನಕಾರಿ ಮತ್ತು ಮಾನಹಾನಿಕರ ಟೀಕೆಗಳನ್ನು ಮಾಡದಂತೆ ಅಥವಾ ಪ್ರಕಟಿಸದಂತೆ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ ಮತ್ತು ವರದಿಗಾರ ಪ್ರದೀಪ್ ಭಂಡಾರಿ, ಟೈಮ್ಸ್ ನೌ ವಾಹಿನಿಯ ರಾಹುಲ್ ಶಿವಶಂಕರ್ ಮತ್ತು ನಾವಿಕಾ ಕುಮಾರ್ ಅವರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆಯನ್ನು ಡಿ.14 ರಂದು ನಿಗದಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.