ಹೈದರಾಬಾದ್: ಸುಪ್ರಸಿದ್ಧ ಧಾರ್ಮಿಕ ಸ್ಥಳ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿದ್ದು, ಭಕ್ತರ ದಟ್ಟಣೆಯಿಂದಾಗಿ ದರ್ಶನಕ್ಕಾಗಿ 48 ಗಂಟೆಗೂ ಅಧಿಕ ಸಮಯ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ದರ್ಶನಕ್ಕಾಗಿ ಇರುವ ಎಲ್ಲ ಸರದಿ ಸಾಲುಗಳು ಭರ್ತಿಯಾಗಿದ್ದು, ಇವುಗಳ ಹೊರತು 5 ಕಿ.ಮೀನಷ್ಟು ಭಕ್ತರ ಸಾಲು ಇದೆ. ಬೆಟ್ಟದ ಪ್ರವೇಶ ಮಾರ್ಗ ಅಲಿಪಿರಿ ಟೋಲ್ಗೇಟ್ ಬಳಿಯೂ ವಾಹನಗಳ ದಟ್ಟಣೆ ಉಂಟಾಗಿದೆ.

ಭಕ್ತರ ದಟ್ಟಣೆಯ ಹಿನ್ನೆಲೆಯಲ್ಲಿ ಕುಡಿಯುವ ನೀರು, ಹಾಲು, ಅನ್ನ ಪ್ರಸಾದಕ್ಕೆ ವಿತರಣೆಗೆ ನೆರವಾಗಲು 2,500 ಸ್ವಯಂಸೇವಕರನ್ನು ಟಿಟಿಡಿ ನಿಯೋಜಿಸಿದೆ.

ಅ.2 ರವರೆಗೆ ಸಾಲು ಸಾಲು ರಜೆ ಇರುವ ಕಾರಣ ಭಕ್ತರ ದಟ್ಟಣೆಗೆ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಯ್ದ ದಿನಗಳಲ್ಲಿ ನೂಕುನುಗ್ಗಲು ಕಡಿಮೆ ಮಾಡಲು ಅಕ್ಟೋಬರ್ 1, 7, 8, 14 ಮತ್ತು 15ರಂದು ಎಸ್ಎಸ್ಡಿ ಟೋಕನ್ ವಿತರಣೆಯನ್ನು ರದ್ದುಪಡಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.