ಹಿಮಾಚಲಪ್ರದೇಶ/ ಉತ್ತರಾಖಂಡ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 55 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ ಮೂವರು ಮೃತಪಟ್ಟಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಡೆಹ್ರಾಡೂನ್, ಪುರಿ, ತೆಹ್ರಿ, ನೈನಿತಾಲ್, ಚಂಪಾವತ್ ಮತ್ತು ಉಧಮ್ ಸಿಂಗ್ ನಗರಗಳು ಸೇರಿದಂತೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮಳೆಯ ಅವಘಡಗಳಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯಬೇಕಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿ ಸರಳ ಆಚರಣೆಗೆ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸೂಚಿಸಿದ್ದಾರೆ.

ಮಳೆಯಿಂದ ಈಗಾಗಲೇ 55 ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡಿ ಪ್ರದೇಶದಲ್ಲಿ ಅತಿ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭೂಕುಸಿತದಿಂದ ಹೆದ್ದಾರಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ವಿಪತ್ತು ನಿರ್ವಹಣಾ ತಂಡ ತೊಡಗಿದೆ. ಚಂಡೀಗಢ–ಶಿಮ್ಲಾ ನಡುವಿನ ರಾಷ್ಟ್ರೀಯ ಹೆದ್ದಾರಿಗಳು ಸಂಚಾರಕ್ಕೆ ಮುಕ್ತವಾಗಿದ್ದು, ರಾಜ್ಯ ಹೆದ್ದಾರಿಗಳ ತೆರವಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಲುಗಿದ ಉತ್ತರಾಖಂಡ

ಇನ್ನು, ಉತ್ತರಾಖಂಡದ ರಿಷಿಕೇಶದಲ್ಲಿ ಸೋಮವಾರ ದೇಶದಲ್ಲೇ ಅತಿ ಹೆಚ್ಚು ಮಳೆ ಸುರಿದಿದ್ದು, ಮೂವರು ಮೃತಪಟ್ಟು 10 ಮಂದಿ ಕಾಣೆಯಾಗಿದ್ದಾರೆ. ಮಳೆ ಸಂಬಂಧಿ ಅವಘಡಗಳಿಂದ ಈವರೆಗೆ ರಾಜ್ಯದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕುಸಿತದಿಂದ ಬದರಿನಾಥ, ಕೇದರನಾಥ ಮತ್ತು ಗಂಗೋತ್ರಿ ರಸ್ತೆಗಳು ಹಾಳಾಗಿದ್ದು, ಯಾತ್ರಾರ್ಥಿಗಳಿಗೆ ಎರಡು ದಿನಗಳ ಕಾಲ ನಿರ್ಬಂಧಿಸಲಾಗಿದೆ.

ಜೋಶಿಮಠದಲ್ಲಿ ಮತ್ತೆ ಹೊಸದಾಗಿ ಭೂಕುಸಿತ ಉಂಟಾಗುತ್ತಿದ್ದು, ಸುಮಾರು 16 ಕುಟುಂಬಗಳು ಅಪಾಯವನ್ನು ಎದುರಿಸುತ್ತಿವೆ. ಭಾರೀ ಪ್ರಮಾಣದ ಭೂಕುಸಿತದ ಮುನ್ಸೂಚನೆಯ ಕಾರಣ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದು, ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದಾರೆ. ಅಲ್ಲದೆ ಪ್ರವಾಹ ಪೀಡಿತ ಪ್ರದೇಶದ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.