ತಿರುವನಂತಪುರ: ಕೇರಳದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮೂರು ಜಿಲ್ಲೆಗಳಲ್ಲಿ ಶನಿವಾರ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ರಾಜ್ಯದ ಹಲವು ಭಾಗಗಳಲ್ಲಿ 24 ಗಂಟೆಗಳಲ್ಲಿ 20 ಸೆಂ.ಮೀ ಮಳೆಯಾಗಿದ್ದು, ಕೊಚ್ಚಿ, ತ್ರಿಶ್ಶೂರ್ ಸೇರಿದಂತೆ ಪ್ರಮುಖ ನಗರಗಳಲ್ಲಿನ ಹಲವು ಪ್ರದೇಶಗಳು ಶುಕ್ರವಾರ ಜಲಾವೃತವಾಗಿವೆ. ಹವಾಮಾನ ಇಲಾಖೆಯು ಪತ್ತಣಂತಿಟ್ಟ, ಕೋಟ್ಟಯಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಶನಿವಾರ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

‘ಮಳೆಯಿಂದಾಗಿ ಉಂಟಾದ ವಿವಿಧ ಅವಘಡಗಳಲ್ಲಿ ಇದುವರೆಗೆ ಒಟ್ಟು 11 ಮಂದಿ ಮೃತಪಟ್ಟಿದ್ದಾರೆ’ ಎಂದು ಕಂದಾಯ ಸಚಿವ ಕೆ.ರಾಜನ್ ತಿಳಿಸಿದ್ದಾರೆ.

ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ನಗರದ ಹಲವು ಭಾಗಗಳು ಮುಳುಗಡೆಯಾಗಿದ್ದವು. ಸಮೀಪದ ಆಲುವಾ ನಗರದಲ್ಲೂ ಅದೇ ಪರಿಸ್ಥಿತಿಯಿತ್ತು. ರಾಜ್ಯದ ಹಲವೆಡೆ ಮರಗಳು ಧರೆಗುರುಳಿದ್ದು, ಲಘು ಭೂಕುಸಿತ ಸಂಭವಿಸಿದೆ, ರಸ್ತೆಗಳಿಗೆ ಹಾನಿಯಾಗಿದೆ. ಏಳು ನಿರಾಶ್ರಿತರ ಕೇಂದ್ರವನ್ನು ತೆರೆಯಲಾಗಿದ್ದು, 223 ಜನರನ್ನು ಸ್ಥಳಾಂತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.