ಜಮ್ಮು (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಪಟ್ನಿಟಾಪ್ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದ್ದು ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ನಿರತವಾಗಿದ್ದ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಪೈಲಟ್‌ಗಳಾದ ಮೇಜರ್ ರೋಹಿತ್ ಕುಮಾರ್ ಮತ್ತು ಮೇಜರ್ ಅನುಜ್ ರಜಪೂತ್ ಗಾಯಗೊಂಡಿದ್ದರು. ಇಬ್ಬರನ್ನೂ ಹತ್ತಿರದ ವೈದ್ಯಕೀಯ ಸೌಲಭ್ಯದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಅವರು ಹೇಳಿದರು.

ಬೆಳಿಗ್ಗೆ 10.30ರಿಂದ 10.45ರ ನಡುವೆ ಈ ಘಟನೆ ಸಂಭವಿಸಿದೆ.ಘಟನೆ ಸಂಭವಿಸಿದಾಗ ಪಟ್ನಿಟಾಪ್ ಮೇಲೆ ದಟ್ಟ ಮಂಜು ಕವಿದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ–ಸುಧಾರಿತ ಸ್ಫೋಟಕ ಸಾಧನ ಪತ್ತೆ; ಜಮ್ಮು–ಕಾಶ್ಮೀರದಲ್ಲಿ ತಪ್ಪಿದ ಅನಾಹುತ

'ನಮಗೆ ಮಾಹಿತಿ ಬಂದ ಕೂಡಲೇ ಪೊಲೀಸರ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ' ಎಂದು ಉಧಂಪುರದಡಿಐಜಿ ಸುಲೆಮಾನ್ ಚೌಧರಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.