ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ₹2.5 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಬಾರ್ಪೇಟಾ ಮೂಲದ ಆರೋಪಿಗಳು ದಿಮಾಪುರದಿಂದ ಅಸ್ಸಾಂಗೆ ಅವಧ್–ಅಸ್ಸಾಂ ಎಕ್ಸ್ಪ್ರೆಸ್ ಮೂಲಕ ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಕೂಡಲೇ ಕಾರ್ಯಾಚರಣೆ ನಡೆಸಿದ ವಿಶೇಷ ಕಾರ್ಯಪಡೆ ತಂಡವು (ಎಸ್ಟಿಎಫ್) ಗುವಾಹಟಿಯ ಕತಾಹಬರಿಯ ಬಾಡಿಗೆ ಮನೆಯಲ್ಲಿ ಆರೋಪಿಗಳನ್ನು ಬಂಧಿಸಿದೆ ಎಂದು ಅಸ್ಸಾಂ ಪೊಲೀಸ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಣಬ್ಜ್ಯೋತಿ ಗೋಸ್ವಾಮಿ ತಿಳಿಸಿದ್ದಾರೆ.

ಆರೋಪಿಗಳಿಂದ ಸುಮಾರು ₹2.5 ಕೋಟಿ ಮೌಲ್ಯದ 308 ಗ್ರಾಂ ತೂಕದ 22 ಹೆರಾಯಿನ್ ಸೋಪ್ ಬಾಕ್ಸ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.