ಕುಲು (ಹಿಮಾಚಲ ಪ್ರದೇಶ): ಭಾರಿ ಹಿಮಪಾತದಿಂದಾಗಿ ಅಟಲ್ ಸುರಂಗದಲ್ಲಿ ಸಿಲುಕಿದ್ದ 300 ಪ್ರವಾಸಿಗರನ್ನು ಹಿಮಾಚಲ ಪ್ರದೇಶ ಪೊಲೀಸರು ರಕ್ಷಿಸಿದ್ದಾರೆ.

ಹಿಮಾಚಲ ಪ್ರದೇಶ ರಾಜ್ಯ ಸಾರಿಗೆ ಬಸ್ ಸೇರಿ ಸುಮಾರು 50 ವಾಹನಗಳು ಅಟಲ್ ಸುರಂಗದಲ್ಲಿ ಸಿಲುಕಿದ್ದವು, ಎಲ್ಲಾ ವಾಹನಗಳನ್ನು ಮತ್ತು ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ ಎಂದು ಕುಲು ಪೊಲೀಸ್ ವರಿಷ್ಠಾಧಿಕಾರಿ ಸಾಕ್ಷಿ ವೆರ್ಮಾ ತಿಳಿಸಿದ್ದಾರೆ.

ಮುಂದಿನ 48 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಎತ್ತರದ ಪ್ರದೇಶದಲ್ಲಿ ಹಿಮಪಾತ ಮತ್ತು ಮಳೆ ಬೀಳುವ ಸಾಧ್ಯತೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಚಂಬಾ, ಕಂಗ್ರಾ, ಸ್ಪಿತಿ, ಮಂಡಿ, ಶಿಮ್ಲಾ ಸೇರಿ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.