ಚೆನ್ನೈ: ‘ನೀಟ್’ನಲ್ಲಿ ಉತ್ತೀರ್ಣರಾದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವೈದ್ಯ ಹಾಗೂ ದಂತವೈದ್ಯ ಕಾಲೇಜುಗಳಿಗೆ ಪ್ರವೇಶದಲ್ಲಿ ಶೇ 7.5ರಷ್ಟು ಮೀಸಲಾತಿ ನೀಡುವ ಸಂಬಂಧ ಆಗಿನ ಎಐಎಡಿಎಂಕೆ ಸರ್ಕಾರ ಅಂಗೀಕರಿಸಿದ್ದ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಮದ್ರಾಸ್ ಹೈಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.

ಈ ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯನ್ಯಾಯಮೂರ್ತಿ ಎಂ.ಎನ್.ಭಂಡಾರಿ ಹಾಗೂ ನ್ಯಾಯಮೂರ್ತಿ ಡಿ.ಭರತ ಚಕ್ರವರ್ತಿ ಅವರಿದ್ದ ನ್ಯಾಯಪೀಠ ವಜಾಗೊಳಿಸಿತು.

ಈ ಕಾಯ್ದೆಯಿಂದಾಗಿ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಕನಿಷ್ಠ 400 ವಿದ್ಯಾರ್ಥಿಗಳಿಗೆ ವೈದ್ಯ ಕಾಲೇಜುಗಳಲ್ಲಿಪ್ರತಿ ವರ್ಷ ಪ್ರವೇಶ ಪಡೆಯಲು ಸಾಧ್ಯವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.