ಶಿಮ್ಲಾ: ಹೆಣ್ಣು ಭ್ರೂಣ ಹತ್ಯೆ ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂದೇ ಹೆಣ್ಣು ಮಗು ಹೊಂದಿರುವ ಪೋಷಕರಿಗೆ ₹2 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ಖು ಗುರುವಾರ ತಿಳಿಸಿದ್ದಾರೆ.

ಇಂದಿರಾ ಗಾಂಧಿ ಬಾಲಿಕಾ ಯೋಜನೆಯಡಿಯಲ್ಲಿ ನೀಡುತ್ತಿರುವ ಪ್ರೋತ್ಸಾಹ ಧನವನ್ನು ₹35 ಸಾವಿರದಿಂದ ₹2 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಖ್ಖು, ‘ಒಂದು ಹೆಣ್ಣು ಮಗು ಜನಿಸಿದ ನಂತರ ಕುಟುಂಬ ಯೋಜನೆ ಅಳವಡಿಸಿಕೊಂಡ ಪೋಷಕರಿಗೆ ₹2 ಲಕ್ಷ ಹಾಗೂ ಎರಡು ಹೆಣ್ಣು ಮಕ್ಕಳಾದ ನಂತರ ಮತ್ತೊಂದು ಮಗು ಬೇಡ ಎಂದು ನಿರ್ಧರಿಸಿದ ಪೋಷಕರಿಗೆ ₹1 ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.