ನವದೆಹಲಿ: ಮುಸ್ಮಿಮರಿಗೆ 5 ಎಕರೆ ಜಾಗ ನೀಡಬೇಕು ಎನ್ನುವ ಅಯೋಧ್ಯೆ ತೀರ್ಪು ಪ್ರಶ್ನಿಸಿ ಅಖಿಲ ಭಾರತ ಹಿಂದೂ ಮಹಾಸಭಾ ಸೋಮವಾರ ಮರುಪರಿಶೀಲನ ಅರ್ಜಿ ಸಲ್ಲಿಸಿದೆ.

ಯೋಧ್ಯೆಯಲ್ಲಿನ ರಾಮ ಜನ್ಮಭೂಮಿ–ಬಾಬರಿ ಮಸೀದಿಗೆ ಸಂಬಂಧಿಸಿದ ಬಹುಕಾಲದ ಅನಿಶ್ಚಿತ ಸ್ಥಿತಿಗೆ ಕೊನೆ ಹೇಳುವ ಸಲುವಾಗಿ ಸುಪ್ರೀಂಕೋರ್ಟ್ ನವೆಂಬರ್ 9ರಂದು ಐತಿಹಾಸಿಕ ತೀರ್ಪು ನೀಡಿತ್ತು.

ಈಗಾಗಲೇ ಅಯೋಧ್ಯೆ ತೀರ್ಪು ಪ್ರಶ್ನಿಸಿ ಜಮಾತ್ ಉಲೇಮಾ ಇ ಹಿಂದ್ ಸಂಘಟನೆಯು ಸುಪ್ರೀಂ ಕೋರ್ಟ್ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ಸದಸ್ಯರ ನ್ಯಾಯಪೀಠ, ನಿರ್ಮೋಹಿ ಅಖಾಡದ ಅರ್ಜಿ ವಜಾ ಮಾಡಿ, ರಾಮಲಲ್ಲಾ ಅನ್ನೇ ಮುಖ್ಯ ಅರ್ಜಿದಾರ ಎಂದು ಮಾನ್ಯ ಮಾಡಿತ್ತು. ವಿವಾದಿತ ಜಾಗ ರಾಮಲಲ್ಲಾಗೆ ಸೇರಿದ್ದು. ಅಲ್ಲಿ ರಾಮಮಂದಿರ ನಿರ್ಮಿಸಬೇಕು. ಮಂದಿರದ ಹೊಣೆಯನ್ನು ಟ್ರಸ್ಟ್ಗೆ ನೀಡಬೇಕು ಎಂದಿತ್ತು.

ಟ್ರಸ್ಟ್ ರಚಿಸಲು, ರಾಮಮಂದಿರ ನಿರ್ಮಾಣಕ್ಕೆ ಮತ್ತು ಮಸೀದಿಗೆ ಪರ್ಯಾಯ ಭೂಮಿ ನೀಡಲು ಸರ್ಕಾರಕ್ಕೆ 3–4 ತಿಂಗಳ ಗಡುವು ವಿಧಿಸಿತ್ತು.ಸುನ್ನಿ ವಕ್ಫ್ ಬೋರ್ಡ್ಗೆ ಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡಬೇಕು ಎಂದು ನ್ಯಾಯಪೀಠ ತೀರ್ಪಿನಲ್ಲಿತಿಳಿಸಿತ್ತು.

ಈಗ ಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡಬೇಕು ಎನ್ನುವ ತೀರ್ಪಿನ ಕುರಿತು ಮಹಾಸಭಾ ಪ್ರಶ್ನೆ ಎತ್ತಿದೆ.

‘ಹಿಂದೂಗಳ ಧಾರ್ಮಿಕ ಜಾಗದಲ್ಲಿ ಕಾಲಿಟ್ಟು ಕಾನೂನು ಬಾಹಿರ ಕೆಲಸ ಮಾಡಿದವರಿಗೆ ಬಹುಮಾನದ ರೂಪದಲ್ಲ ಜಾಗ ನೀಡಲು ಸಾಧ್ಯವಿಲ್ಲ. 1934ರಲ್ಲಿ , 1949 ಮತ್ತು 1992ರಲ್ಲಿ ಹಿಂದೂಗಳು ಮಾಡಿದ ತಪ್ಪಿಗಾಗಿ, ಅವರನ್ನು ಸಮಾಧಾನ ಮಾಡುವುದಕ್ಕಾಗಿ 5 ಎಕರೆ ಜಾಗ ನೀಡಬಾರದು’ ಎಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.