ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ

Published : 5 ಅಕ್ಟೋಬರ್ 2024, 13:19 IST
Last Updated : 5 ಅಕ್ಟೋಬರ್ 2024, 13:19 IST
ಫಾಲೋ ಮಾಡಿ
Comments

ಲಖನೌ: ಪ್ರವಾದಿ ಮುಹಮ್ಮದ್ ಮತ್ತು ಕುರಾನ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನರಸಿಂಹಾನಂದ ಮಹಾರಾಜ್ ಹೇಳಿಕೆ ಖಂಡಿಸಿ ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಲಾಗಿತ್ತು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.

ನರಸಿಂಹಾನಂದ ವಿರುದ್ಧ ಈವರೆಗೆ ಮೂರು ಪ್ರಕರಣಗಳು ದಾಖಲಾಗಿವೆ. ಪ್ರಸಿದ್ಧ ದಾಸ್ನಾ ದೇವಾಲಯದ ಪೀಠಾಧಿಪತಿ ನರಸಿಂಹಾನಂದ ಅವರನ್ನು ಬಂಧಿಸಲಾಗಿದ್ದು, ಗಾಜಿಯಾಬಾದ್ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶುಕ್ರವಾರ ರಾತ್ರಿ ಬುಲಂದ್‌ಶಹರ್ ಪಟ್ಟಣದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಸಂಬಂಧ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉದ್ವಿಗ್ನ ವಾತಾವರಣವಿರುವ ಕಾರಣ ಗಾಜಿಯಾಬಾದ್, ಬುಲಂದ್‌ಶಹರ್, ಅಲಿಗಢ ಮತ್ತು ಇತರ ಸೂಕ್ಷ್ಮ ನಗರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನರಸಿಂಹಾನಂದ ಅವರು ಕಳೆದ ತಿಂಗಳು ದೇವಸ್ಥಾನದಲ್ಲಿ ಪ್ರವಚನದ ವೇಳೆ ಪ್ರವಾದಿ ಮತ್ತು ಕುರಾನ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ವರದಿಯಾಗಿದೆ. ಈ ಹಿಂದೆಯೂ ದ್ವೇಷಪೂರಿತ ಭಾಷಣದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT