ವಾಷಿಂಗ್ಟನ್: ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ನಿಧನಕ್ಕೆ ಮೈಕ್ರೋ ಸಾಫ್ಟ್ ಸಹಸಂಸ್ಥಾಪಕ ಬಿಲ್ ಗೇಟ್ಸ್ ಸಂತಾಪ ಸೂಚಿಸಿದ್ದಾರೆ.

ಟಾಟಾ ಅವರ ಜೊತೆ ಕಳೆದ ಕ್ಷಣಗಳ ಬಗ್ಗೆ ತಮ್ಮ ಲಿಂಕ್ಡ್ ಇನ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಟಾಟಾ ಅವರನ್ನು ದೂರದೃಷ್ಟಿಯ ನಾಯಕ ಎಂದು ಬಣ್ಣಿಸಿದ್ದಾರೆ.

‘ರತನ್ ಟಾಟಾ ಒಬ್ಬ ದೂರದೃಷ್ಟಿ ನಾಯಕ. ಜನರ ಜೀವನವನ್ನು ಸುಧಾರಿಸಲು ಅವರು ಮಾಡಿರುವ ಕೆಲಸಗಳು ಭಾರತ ಮತ್ತು ಪ್ರಪಂಚದಾದ್ಯಂತ ಅಳಿಸಲಾಗದ ಛಾಪು ಮೂಡಿಸಿದೆ. ಅಂತಹ ವ್ಯಕ್ತಿಯನ್ನು ಹಲವು ಭಾರಿ ಭೇಟಿಯಾಗುವ ಅವಕಾಶ ನನಗೆ ದೊರೆತಿತ್ತು. ಮಾನವೀಯ ಸೇವೆಗಳಿಗೆ ಅವರು ನೀಡಿದ ಕೊಡುಗೆ ಅಪಾರ’ ಎಂದಿದ್ದಾರೆ.

‘ಆರೋಗ್ಯಯುತವಾಗಿ ಸಮೃದ್ಧ ಜೀವನ ನಡೆಸಲು ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಲವು ಉಪಕ್ರಮಗಳಲ್ಲಿ ನಾವು ಪಾಲುದಾರರಾಗಿದ್ದೆವು. ಅವರ ಅಗಲಿಕೆಯಿಂದ ಉಂಟಾದ ಶೂನ್ಯವು ಮುಂಬರುವ ವರ್ಷಗಳಲ್ಲಿ ಜಗತ್ತಿಗೆ ಕಾಡಲಿದೆ. ಅವರು ಬಿಟ್ಟು ಹೋದ ಪರಂಪರೆ ಮತ್ತು ನೆಟ್ಟ ಉದಾಹರಣೆ ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡಲಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.