ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತವು ಬುಧವಾರದ ವೇಳೆಗೆ ಮಹಾರಾಷ್ಟ್ರ ಹಾಗೂ ಗುಜರಾತ್‌ಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಈ ರಾಜ್ಯಗಳಲ್ಲಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಗೃಹ ಸಚಿವ ಅಮಿತ್ ಶಾ ಸೋಮವಾರ ಸಭೆ ನಡೆಸಿದರು.

‘ಮಹಾರಾಷ್ಟ್ರ, ಗುಜರಾತ್, ದಮನ್ ಹಾಗೂ ದಿಯು, ದಾದ್ರ ಹಾಗೂ ನಗರ್ ಹವೇಲಿಗೆ ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಲಾ 45 ಸಿಬ್ಬಂದಿಗಳಿರುವ 23 ತಂಡಗಳನ್ನು ಗೃಹ ಸಚಿವಾಲಯ ನಿಯೋಜಿಸಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಚಂಡಮಾರುತ ಸಾಧ್ಯತೆ

‘ಎನ್‌ಡಿಆರ್‌ಎಫ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ), ಭಾರತೀಯ ಹವಾಮಾನ ಇಲಾಖೆಯ(ಐಎಂಡಿ) ಹಿರಿಯ ಅಧಿಕಾರಿಗಳ ಜೊತೆ ಅಮಿತ್ ಶಾ ಅವರು ಸಭೆ ನಡೆಸಿದ್ದಾರೆ’ ಎಂದು ಗೃಹ ಸಚಿವರ ಕಚೇರಿ ಟ್ವೀಟ್ ಮಾಡಿದೆ.

ಗಂಟೆಗೆ 105–110 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತವು ಅಪ್ಪಳಿಸುವ ಸಾಧ್ಯತೆ ಇದ್ದು, ದಕ್ಷಿಣ ಗುಜರಾತ್ ಹಾಗೂ ಮಹಾರಾಷ್ಟ್ರದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.