ಹಾಂಗ್ಕಾಂಗ್: ಚುನಾವಣೆಗೆ ಸಲ್ಲಿಸಲಾಗಿರುವ 12 ಮಂದಿ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ.

ಸೆಪ್ಟೆಂಬರ್ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲುಜೋಶುವಾ ವೊಂಗ್ ಸೇರಿದಂತೆ ಪ್ರಜಾಪ್ರಭುತ್ವ ಪರ ಇರುವ 12 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಗರಕ್ಕೆ ಸಂಬಂಧಿಸಿದ ಸಂವಿಧಾನಕ್ಕೆ ಬದ್ಧತೆ ಮತ್ತು ನಿಷ್ಠೆ ಹೊಂದಿಲ್ಲ ಎಂಬ ಕಾರಣಕ್ಕೆ ಅವರ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾಪ್ರಭುತ್ವ ಪರ ಹೋರಾಟಗಾರ ಟಿಫಾನಿ ಯುಯೆನ್, ಸಂಸದ ಡೆನಿಸ್ ಕ್ವಾಕ್ ಸೇರಿದಂತೆ ಸಿವಿಕ್ ಪಕ್ಷದ ಮೂವರ ನಾಮಪತ್ರ ತಿರಸ್ಕೃತಗೊಂಡಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಜೋಶುವಾ ವೊಂಗ್ ಸೇರಿದಂತೆ ಇತರ ಅಭ್ಯರ್ಥಿಗಳ ನಾಮಪತ್ರಪರಿಶೀಲನೆ ಪ್ರಕ್ರಿಯೆ ವೇಳೆ ಅವರ ರಾಜಕೀಯ ನಿಲುವುಗಳನ್ನು ಕೇಳಲಾಗಿತ್ತು. ಸಂಪೂರ್ಣ ನಾಮಪತ್ರ ಪರಿಶೀಲನೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತರ ನಾಮಪತ್ರಗಳನ್ನು ಪರಿಶೀಲಿಸಲಾಗುತ್ತಿದೆ. ಇನ್ನೂ ಹಲವರ ನಾಮಪತ್ರಗಳು ತಿರಸ್ಕೃತಗೊಳ್ಳುವ ಸಾಧ್ಯತೆಗಳಿವೆ ಎಂದೂ ಹೇಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.