ವಿಜಯವಾಡ: 'ಚಲೋ ಸೆಕ್ರೆಟರಿಯೇಟ್' ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರನ್ನು ಬಂಧಿಸಿ 'ಗೃಹಬಂಧನ'ದಲ್ಲಿ ಇರಿಸಲಾಗುತ್ತಿದೆ ಎಂದು ಆರೋಪಿಸಿರುವ ಆಂಧ್ರಪ್ರದೇಶದ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ರೆಡ್ಡಿ, ಇಡೀ ರಾತ್ರಿಯನ್ನು ವಿಜಯವಾಡದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಕಳೆದಿದ್ದಾರೆ.

ರಾಜ್ಯದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಇಂದು ‘ಚಲೋ ಸೆಕ್ರೆಟರಿಯೇಟ್’ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

‘ಲಕ್ಷಗಟ್ಟಲೆ ನಿರುದ್ಯೋಗಿ ಯುವಕರಿಗೆ ದ್ರೋಹ ಬಗೆದಿರುವ ಸರ್ಕಾರದ ನೀತಿಯ ವಿರುದ್ಧ ಅಸಮ್ಮತಿ ವ್ಯಕ್ತಪಡಿಸುವ ಹಕ್ಕು ನಮಗಿಲ್ಲವೇ? ಸರ್ಕಾರದ ವಿರುದ್ಧ ಪ್ರಶ್ನಿಸುವ ನಮ್ಮನ್ನು ಸಮಾಜ ವಿರೋಧಿಗಳಂತೆ ಕಾಣಲಾಗುತ್ತಿದೆ’ ಎಂದು ಶರ್ಮಿಳಾ ಅವರ ಹೇಳಿಕೆ ಉಲ್ಲೇಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಕಾಂಗ್ರೆಸ್ ನಾಯಕರನ್ನು ತಡೆಯಲಾಗುತ್ತಿದೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದೆ ಸರಿಯುದಿಲ್ಲ ಎಂದಿರುವ ಶರ್ಮಿಳಾ, ಗೃಹ ಬಂಧನದಿಂದ ತಪ್ಪಿಸಿಕೊಳ್ಳಲು ಆಂಧ್ರ ರತ್ನ ಭವನಕ್ಕೆ ತೆರಳಿ ಇಡೀ ರಾತ್ರಿಯನ್ನು ಅಲ್ಲೇ ಕಳೆದಿದ್ದಾರೆ.

ಶರ್ಮಿಳಾ ಅವರು ಹಾಸಿಗೆ ಹೊದ್ದು ಕಚೇರಿಯಲ್ಲಿ ಮಲಗಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ.

ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.