ಮಂಗಳವಾರ, 1 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲದಲ್ಲಿ ಭೂಕುಸಿತ: ಕಿನ್ನೌರ್-ಶಿಮ್ಲಾ ರಸ್ತೆ ಸಂಪರ್ಕ ಕಡಿತ

Published : 1 ಅಕ್ಟೋಬರ್ 2024, 11:36 IST
Last Updated : 1 ಅಕ್ಟೋಬರ್ 2024, 11:36 IST
ಫಾಲೋ ಮಾಡಿ
Comments

ಶಿಮ್ಲಾ: ಹಿಮಾಚಲ ಪ್ರದೇಶದ ನಿಗುಲ್ಸಾರಿಯಲ್ಲಿ ಇಂದು (ಮಂಗಳವಾರ) ಮುಂಜಾನೆ ಭಾರಿ ಭೂಕುಸಿತ ಸಂಭವಿಸಿ ಕಿನ್ನೌರ್ ಜಿಲ್ಲೆ ಮತ್ತು ಶಿಮ್ಲಾ ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಭೂಕುಸಿತದಿಂದ ಯಾರಿಗೂ ಗಾಯಗಳಾಗಿಲ್ಲ. ಆದರೆ, ಹೆಚ್ಚಿನ ಸಂಖ್ಯೆಯ ಪ್ರವಾಸಿಗರ ವಾಹನಗಳು ಮತ್ತು ಸೇಬು ತುಂಬಿದ ಟ್ರಕ್‌ಗಳು ಹೆದ್ದಾರಿಯ ಎರಡು ಬದಿಗಳಲ್ಲಿ ಸಿಲುಕಿಕೊಂಡಿವೆ. ಹೆದ್ದಾರಿ ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ಆದರೆ, ಪವರ್ತಗಳ ಮೇಲಿಂದ ಕಲ್ಲು, ಮಣ್ಣಿನ ಕುಸಿತದಿಂದಾಗಿ ಕಾಮಗಾರಿಗೆ ಅಡ್ಡಿಯಾಗುತ್ತಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಹಿಮಾಚಲ ಪ್ರದೇಶದಲ್ಲಿ ಜೂನ್‌ 27ರಂದು ಮಾನ್ಸೂನ್‌ ಪ್ರಾರಂಭವಾದಾಗಿನಿಂದ ಈವರೆಗೆ ಮಳೆ ಸಂಬಂಧಿತ ಅವಘಡಗಳಲ್ಲಿ ಸುಮಾರು 186 ಜನರು ಮೃತಪಟ್ಟಿದ್ದಾರೆ. 28 ಮಂದಿ ಕಾಣೆಯಾಗಿದ್ದಾರೆ. ಮಳೆಯಿಂದಾಗಿ ರಾಜ್ಯದಲ್ಲಿ ₹1,360 ಕೋಟಿ ಆಸ್ತಿ–ಪಾಸ್ತಿ ನಷ್ಟವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT