ನವದೆಹಲಿ: ದೇಶದಾದ್ಯಂತ ಜವಾಹರ ನವೋದಯ ವಿದ್ಯಾಲಯಗಳಲ್ಲಿ ಹೆಚ್ಚುವರಿಯಾಗಿ 5 ಸಾವಿರ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲುಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್ಆರ್ಡಿ) ಅನುಮತಿ ನೀಡಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಈ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣವನ್ನು 9 ಸಾವಿರ ಸ್ಥಾನಗಳಿಗೆ ಹೆಚ್ಚಳ ಮಾಡಲಾಗಿತ್ತು.

ಪ್ರಸ್ತುತ ದೇಶದಾದ್ಯಂತ 46 ಸಾವಿರ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಹೆಚ್ಚುವರಿ 5 ಸಾವಿರ ಸ್ಥಾನಗಳಿಗೆ 2019–20ನೇ ಶೈಕ್ಷಣಿಕ ವರ್ಷದಿಂದ ದಾಖಲಾತಿ ಆರಂಭವಾಗಲಿದೆ. ಇದರಿಂದಾಗಿ ನವೋದಯ ವಿದ್ಯಾಲಯಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆ 51 ಸಾವಿರಕ್ಕೆ ಏರಿಕೆಯಾಗಲಿದೆ.

ಈಗಾಗಲೇ ಪ್ರವೇಶ ಪರೀಕ್ಷೆ ಬರೆಯಲು 31.10 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಹೊಸದಾಗಿ ರಚನೆಯಾಗಿರುವ ಜಿಲ್ಲೆಗಳಲ್ಲಿಯೂ ನವೋದಯ ವಿದ್ಯಾಲಯಗಳನ್ನು ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.

ಉಚಿತ ವಸತಿ ಶಾಲೆ ಸೌಲಭ್ಯದಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶಗಳು ದೊರೆಯಲಿವೆ’ ಎಂದು ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.