ಹೈದರಾಬಾದ್: ಕಳೆದ ಶನಿವಾರ ಸಂಜೆ ಇಲ್ಲಿನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ಗುರುತಿಸಲಾದ ಐವರು ಆರೋಪಿಗಳಲ್ಲಿ ಮೂವರು ಅಪ್ರಾಪ್ತ ವಯಸ್ಕರರು ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್ನ ಹೃದಯಭಾಗದಲ್ಲಿ ನಡೆದ ಈ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳ ಮಕ್ಕಳು ಹಾಗೂ ಮೊಮ್ಮಕ್ಕಳು ಭಾಗಿಯಾಗಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಗೃಹ ಸಚಿವರ ಮೊಮ್ಮಗನೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆಂಬ ಆರೋಪಗಳು ಕೇಳಿಬಂದಿವೆ. ಆದರೆ, ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ.

‘ಸಂತ್ರಸ್ತೆಯು ಒಬ್ಬರ ಹೆಸರನ್ನು ಮಾತ್ರ ಬಹಿರಂಗಪಡಿಸಿದಳು. ತಕ್ಷಣ ಆತನನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಯಿತು. ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಮತ್ತು ಸಂತ್ರಸ್ತೆಯ ಹೇಳಿಕೆಯಂತೆ ನಾವು ಐವರು ಅಪರಾಧಿಗಳನ್ನು ಗುರುತಿಸಿದ್ದೇವೆ’ ಎಂದು ಪೋಲೀಸ್ ಅಧಿಕಾರಿ ಜೋಯಲ್ ಡೇವಿಸ್ ತಿಳಿಸಿದ್ದಾರೆ.

ಅಪರಾಧದಲ್ಲಿ ಶಾಸಕನ ಮಗನೂ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಆದರೆ, ಆತ ಅತ್ಯಾಚಾರ ಎಸಗುವ ಮುನ್ನವೇ ಕಾರಿನಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಸಂತ್ರಸ್ತೆ, ಗೆಳೆಯನ ಜೊತೆ ಪಬ್ಗೆ ಹೋಗಿದ್ದಳು. ಆದರೆ ಗೆಳೆಯ ಬೇಗನೇ ಅಲ್ಲಿಂದ ಹೊರಟು ಹೋಗಿದ್ದನು. ಬಳಿಕ ಆಕೆಯನ್ನು ಮರ್ಸಿಡಿಸ್ ಕಾರಿನಲ್ಲಿ ಮನೆಗೆ ಬಿಡುವುದಾಗಿ ನಂಬಿಸಿ ಕರೆದುಕೊಂಡ ಹೋದ ಆರೋಪಿಗಳು, ಜುಬಿಲಿ ಹಿಲ್ಸ್ ಬಳಿ ಕಾರು ನಿಲ್ಲಿಸಿ ಅತ್ಯಾಚಾರ ಎಸಗಿದ್ದಾರೆ.

ಬಾಲಕಿಯ ಕುತ್ತಿಗೆಯ ಭಾಗಕ್ಕೆ ಗಾಯವಾಗಿದ್ದು, ತಂದೆ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.