ವಿಜಯವಾಡ: ಭಾರಿ ಮಳೆಯಿಂದಾಗಿ ಹೈದರಾಬಾದ್–ವಿಜಯವಾಡ ಹೆದ್ದಾರಿ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

ಮುನ್ನೇರು ನದಿಯ ಪ್ರವಾಹದ ನೀರಿನಿಂದಾಗಿ ಎನ್‌ಟಿಆರ್ ಜಿಲ್ಲೆಯ ನಂದಿಗಾಮ ಬಳಿಯ ಇಟಾವರಂನಲ್ಲಿ ರಾಷ್ಟ್ರೀಯ ಹೆದ್ದಾರಿ 65 ಜಲಾವೃತಗೊಂಡಿದೆ.

ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುವ ವಾಹನಗಳು ತೆಲಂಗಾಣದ ಕೋದಾಡುವಿನಲ್ಲಿ ತಿರುವು ತೆಗೆದುಕೊಳ್ಳುತ್ತಿವೆ. ಹುಜೂರುನಗರ ಮತ್ತು ಮಿರ್ಯಾಲಗುಡ ಮೂಲಕ ಸಂಚಾರ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರಿಂದಾಗಿ ಕೋದಾಡು–ಹುಜೂರುನಗರ ರಸ್ತೆಯಲ್ಲಿ ಐದು ಕಿಲೋಮೀಟರ್ ದೂರದವರೆಗೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಖಮ್ಮಂ ಜಿಲ್ಲೆಯ ಮುನ್ನೇರು ನದಿ ಗುರುವಾರದಿಂದ ಉಕ್ಕಿ ಹರಿಯುತ್ತಿದ್ದು, ಭಾರಿ ಪ್ರಮಾಣ ನೀರಿನ ಹರಿವು ಎನ್‌ಟಿಆರ್ ಜಿಲ್ಲೆಯ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಮುಳುಗಡೆಗೆ ಕಾರಣವಾಗಿದೆ. ಅಲ್ಲದೆ, ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕೀಸರ ಟೋಲ್‌ಗೇಟ್‌ನಲ್ಲೂ ಹೆದ್ದಾರಿ ಜಲಾವೃತಗೊಂಡಿದೆ.

ಈ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‌ಆರ್‌ಟಿಸಿ) ಹೈದರಾಬಾದ್–ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಸೇವೆಯನ್ನು ಸ್ಥಗಿತಗೊಳಿಸಿದೆ. ಮಿರ್ಯಾಲಗುಡ, ಪಿದುಗುರಳ್ಳ ಮತ್ತು ಗುಂಟೂರು ಮಾರ್ಗವಾಗಿ ಬಸ್‌ಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುತ್ತಿವೆ ಎಂದು ಟಿಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಸಿ ಸಜ್ಜನರ್ ತಿಳಿಸಿದ್ದಾರೆ.

ಹೆದ್ದಾರಿ ಸಂಚಾರ ಸ್ಥಗಿತಗೊಂಡಿದ್ದರಿಂದ ಟಿಎಸ್‌ಆರ್‌ಟಿಸಿ ಮತ್ತು ಆಂಧ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಪಿಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಜನರು ಗುರುವಾರ ಸಂಜೆ ಗಂಟೆಗಟ್ಟಲೆ ಸಿಲುಕಿಕೊಂಡರು. ಆರಂಭದಲ್ಲಿ, ನಾಲ್ಕು ಮಾರ್ಗದ ಹೆದ್ದಾರಿಯ ಒಂದು ಬದಿಯಲ್ಲಿ ಸಂಚಾರವನ್ನು ನಿಯಂತ್ರಿಸಲು ಪೊಲೀಸರು ಪ್ರಯತ್ನಿಸಿದರು, ಆದರೆ ಎರಡೂ ಬದಿಯ ರಸ್ತೆಗಳು ಮುಳುಗಿದ್ದರಿಂದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.