ಮದನಪಲ್ಲಿ (ಆಂಧ್ರಪ್ರದೇಶ): ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದಿಂದ ಹೊರಬರುವ ವದಂತಿಗಳ ಕುರಿತು ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಪ್ರತಿಕ್ರಿಯಿಸಿದ್ದಾರೆ.

ಗುರುವಾರ(ನಿನ್ನೆ) ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ‘ನಾನು ಇನ್ನೂ ಎನ್ಡಿಎ ಒಕ್ಕೂಟದಲ್ಲಿಯೇ ಇದ್ದೇನೆ, ಎಲ್ಲಿಯೂ ಹೋಗಿಲ್ಲ‘ ಎಂದು ಸ್ಪಷ್ಟಪಡಿಸಿದ್ಧಾರೆ.

ಇದೇ ವೇಳೆ ವೈಎಸ್ಆರ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಪವನ್ ಕಲ್ಯಾಣ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.

ಜನಸೇನೆ ಎನ್ಡಿಎಯಿಂದ ಹೊರಬಂದಿದೆ ಎಂದು ಸಿಎಂ ಜಗನ್ ಮೋಹನ್ ರೆಡ್ಡಿ ಹೇಳುತ್ತಿದ್ದಾರೆ. ನಾನು ಜಗನ್ ಮತ್ತು ವೈಎಸ್ಆರ್ಸಿಪಿ ನಾಯಕರಿಗೆ ಒಂದು ವಿಷಯವನ್ನು ಹೇಳುತ್ತಿದ್ದೇನೆ. ಒಂದು ವೇಳೆ ನಾನು ಎನ್ಡಿಎಯಿಂದ ನಿರ್ಗಮಿಸಿದರೆ ನಿಮಗೆ ತಿಳಿಸುತ್ತೇನೆ. ಗುಟ್ಟಾಗಿ ಹೊರಬರುವುದಿಲ್ಲ. ಆಡಳಿತ ಪಕ್ಷದ ನಾಯಕರು ತಮ್ಮ ಸ್ವಂತ ವ್ಯವಹಾರವನ್ನು ನೋಡಿಕೊಂಡರೆ ಒಳ್ಳೆಯದು. ಬಿಜೆಪಿ ನಾಯಕರು ಆಂಧ್ರಪ್ರದೇಶದ ಭವಿಷ್ಯದ ಬಗ್ಗೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
.ಜಗನ್ ಸರ್ಕಾರ ಶೀಘ್ರ ಪತನ: ಜನಸೇನಾ ಅಧ್ಯಕ್ಷ, ನಟ ಪವನ್ ಕಲ್ಯಾಣ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.