ಮೊಗ (ಪಂಜಾಬ್): ಪಂಜಾಬ್ನ ಮೊಗ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಮಿಗ್-21 ಬಾಯಿಸನ್ ವಿಮಾನವು ಪತನಗೊಂಡಿದ್ದು, ಭಾರತೀಯ ವಾಯುಪಡೆಯ ಪೈಲಟ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

‘ಸೂರತ್ಗಡದಲ್ಲಿ ಎಂದಿನಂತೆ ತರಬೇತಿ ನಡೆಸುತ್ತಿದ್ದಾಗ ಗುರುವಾರ ತಡರಾತ್ರಿ ವಿಮಾನವು ಮೊಗ ಜಿಲ್ಲೆಯ ಗ್ರಾಮವೊಂದರಲ್ಲಿ ಪತನಗೊಂಡಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಲಾಗಿದೆ’ ಎಂದು ಅವರು ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ(ಐಎಎಫ್),‘ಪಶ್ಚಿಮ ವಲಯದಲ್ಲಿ ಗುರುವಾರ ತಡರಾತ್ರಿ ಐಎಎಫ್ನ ಮಿಗ್-21 ಯುದ್ಧವಿಮಾನವು ಪತನಗೊಂಡಿದೆ. ಈ ವೇಳೆ ಪೈಲಟ್ ಸ್ಕ್ವಾಡ್ರನ್ ಲೀಡರ್ ಅಭಿನವ್ ಚೌಧರಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರ ಕುಟುಂಬದವರಿಗೆ ಸದಾ ನಮ್ಮ ಬೆಂಬಲ ಇರುತ್ತದೆ’ ಎಂದು ಐಎಎಫ್ ಹೇಳಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.