ಪೋರಬಂದರ್: ಅರಬ್ಬಿ ಸಮುದ್ರದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಕರಾವಳಿ ಕಾವಲು ಪಡೆಯ(ಐಸಿಜಿ) ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು, ಮೂವರು ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ಪೋರಬಂದರ್ ಸಮೀಪ ಸಾಗುತ್ತಿದ್ದ ‘ಹರಿ ಲೀಲಾ’ ಟ್ಯಾಂಕರ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿಯನ್ನು ರಕ್ಷಿಸಲು ಐಸಿಜಿ ಸೋಮವಾರ ರಾತ್ರಿ 11ಕ್ಕೆ ಕಾರ್ಯಾಚರಣೆ ಆರಂಭಿಸಿತ್ತು. ಆದರೆ, ಕಾರ್ಯಾಚರಣೆ ಮಧ್ಯದಲ್ಲಿಯೇ ಹೆಲಿಕಾಪ್ಟರ್ ಪತನಗೊಂಡಿದೆ. ಸದ್ಯ ಒಬ್ಬ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಉಳಿದ ಮೂವರ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ ಎಂದು ಐಸಿಜಿ ‘ಎಕ್ಸ್’ನಲ್ಲಿ ತಿಳಿಸಿದೆ.

ನಾಪತ್ತೆಯಾದವರ ಶೋಧಕ್ಕೆ ನಾಲ್ಕು ಹಡಗು ಹಾಗೂ ಎರಡು ವಿಮಾನಗಳನ್ನು ನಿಯೋಜಿಸಲಾಗಿದೆ ಎಂಬುದಾಗಿಯೂ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.