ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಶನಿವಾರಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಯೋಧನೊಬ್ಬ ಗಾಯಗೊಂಡಿದ್ದು, ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಪಡೆಯ ವಕ್ತಾರ ಲೆ.ಕರ್ನಲ್ ದೇವೇಂದರ್ ಆನಂದ್ ಹೇಳಿದ್ದಾರೆ.

ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಲಾಮಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಶನಿವಾರ ಸಂಜೆ 3 ಗಂಟೆಗೆ ನಡೆದ ಸ್ಫೋಟದಲ್ಲಿ ಮೇಜರ್ ರ‍್ಯಾಂಕ್ ನ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.

ಸೇನಾಧಿಕಾರಿ ಮತ್ತು ಯೋಧ ಗಸ್ತು ತಿರುಗುತ್ತಿದ್ದಾಗ ಮಣ್ಣಿನಲ್ಲಿ ಹೂತಿರುವ ವಸ್ತುವೊಂದು ಪತ್ತೆಯಾಗಿತ್ತು.ಅದನ್ನು ಪರಿಶೀಲಿಸಲು ಮುಂದಾದಾಗಐಇಡಿ ಸ್ಫೋಟಗೊಂಡಿದ್ದು ಇದರಲ್ಲಿ ಸೇನಾಧಿಕಾರಿ ಸಾವಿಗೀಡಾಗಿದ್ದಾರೆ ಮತ್ತು ಯೋಧ ಗಾಯಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.