ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದಾರೆ ಎನ್ನಲಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ವಿಶೇಷ ಕಾರ್ಯ ಪಡೆಯ (ಎಸ್‌ಟಿಎಫ್) ಇಬ್ಬರು ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಿಜಾಪುರ ಜಿಲ್ಲೆಯ ಇಟ್ವಾರ್ ಗ್ರಾಮದಲ್ಲಿ ಇಂದು ( ಬುಧವಾರ) ನಸುಕಿನ ಜಾವ ಈ ಘಟನೆ ನಡೆದಿದೆ. ಭದ್ರತಾ ಕಾರ್ಯಾಚರಣೆ ಸಂಬಂಧ ಸಿಬ್ಬಂದಿಯು ಅಲ್ಲಿಗೆ ತೆರಳಿದ್ದರು ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗಾಯಗೊಂಡವರನ್ನು ಶಿವಲಾಲ್ ಮಾಂಡವಿ ಮತ್ತು ಮಿಥ್ಲೇಶ್ ಮಾರ್ಕಮ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.