ಚಂಡಿಗಢ(ಹರಿಯಾಣ): ನಯಾಬ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಉರುಳಿಸಲು ವಿಪಕ್ಷ ನಾಯಕ ಭೂಪೇಂದ್ರ ಸಿಂಗ್ ಹೂಡಾ ಮುಂದಾದರೆ ಅದಕ್ಕೆ ನಮ್ಮ ಬೆಂಬಲವಿದೆ ಎಂದು ಜನನಾಯಕ ಜನತಾ ಪಾರ್ಟಿ(ಜೆಜೆಪಿ) ಮುಖ್ಯಸ್ಥ ದುಷ್ಯಂತ್ ಚೌಟಾಲ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೈನಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಸರ್ಕಾರದ ವಿರುದ್ಧ ಮತ ಹಾಕುತ್ತೇವೆ ಎಂದರು.

‘ಲೋಕಸಭೆ ಚುನಾವಣೆಯ ಈ ಸಮಯದಲ್ಲಿ ಸರ್ಕಾರವನ್ನು ಪತನಗೊಳಿಸಲು ಮುಂದಾದರೆ ಅದಕ್ಕೆ ನಮ್ಮ ಬೆಂಬಲವಿದೆ ಎಂದು ಹೂಡಾ ಅವರಿಗೆ ಹೇಳಲು ಬಯಸುತ್ತೇನೆ. ಸರ್ಕಾರವನ್ನು ಉರುಳಿಸಲು ಕಾಂಗ್ರೆಸ್ ಮುಂದಾಗುತ್ತದೆಯೇ?’ ಎಂದು ಕೇಳಿದರು.

‘ನೈತಿಕತೆಯ ಆಧಾರದ ಮೇಲೆ ಮುಖ್ಯಮಂತ್ರಿ ಬಹುಮತ ಸಾಬೀತುಪಡಿಸಬೇಕು ಇಲ್ಲವಾದರೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ನಿಮ್ಮ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಸರ್ಕಾರ ಪತನಗೊಳಿಸಲು ಮುಂದಾಗುತ್ತದೆಯೇ ಎಂಬುವುದನ್ನು ಮೊದಲು ಸ್ಪಷ್ಟಪಡಿಸಲಿ’ ಎಂದು ಹೇಳಿದರು.

ಪ್ರಸ್ತುತ ಹರಿಯಾಣ ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ 88 ಇದ್ದು, ಅದರಲ್ಲಿ ಬಿಜೆಪಿ 40 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ 30 ಮತ್ತು ಜೆಜೆಪಿ 10 ಶಾಸಕರನ್ನು ಹೊಂದಿದೆ. ಐಎನ್‌ಎಲ್‌ಡಿ ಮತ್ತು ಹರಿಯಾಣ ಲೋಕ್‌ಹಿತ್ ಪಕ್ಷವು ತಲಾ ಒಬ್ಬ ಸದಸ್ಯನನ್ನು ಹೊಂದಿದೆ. 6 ಪಕ್ಷೇತರರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.