ಹೈದರಾಬಾದ್: ಒಡಿಶಾ ಮೂಲದ ವಿದ್ಯಾರ್ಥಿನಿಯೊಬ್ಬಳು ಸಂಗರೆಡ್ಡಿ ಜಿಲ್ಲೆಯ ಐಐಟಿ–ಹೈದರಾಬಾದ್ (IIT-Hyderabad) ಕ್ಯಾಂಪಸ್ನಲ್ಲಿನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಂದೇ ತಿಂಗಳ ಅಂತರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಐಐಟಿ–ಹೈದರಾಬಾದ್ನ ಎರಡನೇ ವಿದ್ಯಾರ್ಥಿನಿಯಾಗಿದ್ದಾಳೆ.

ಜುಲೈ 26 ರಂದು ದಾಖಲಾಗಿದ್ದ 21 ವರ್ಷದ ಎಮ್.ಟೆಕ್ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅವರು ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಸಹಪಾಠಿಗಳು ತಿಳಿಸಿದ್ದಾರೆ.

ಮಧ್ಯಾಹ್ನ, ರಾತ್ರಿ ಎರಡೂ ಹೊತ್ತು ಊಟಕ್ಕೆ ಬರದ್ದನ್ನು ಗಮನಿಸಿ, ಆಕೆಯ ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಐಐಟಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸಂಗರೆಡ್ಡಿ ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಡೆತ್ ನೋಟ್ನಲ್ಲಿ ವಿದ್ಯಾರ್ಥಿನಿ ‘ಕುಟುಂಬದಲ್ಲಿ ಹಣಕಾಸಿನ ಸಮಸ್ಯೆಗಳಿವೆ’ ಎಂದು ಬರೆದಿದ್ದಾರೆ, ಅಲ್ಲದೆ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಹೇಳಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಜುಲೈ2 ರಂದು ಬಿ.ಟೆಕ್ ಎರಡನೇ ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.