ನವದಹೆಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ನಡೆಸುವ ಜಾರಿ ನಿರ್ದೇಶನಾಲಯದ ಹಂಗಾಮಿ ಮುಖ್ಯಸ್ಥರಾಗಿರುವ ರಾಹುಲ್ ನವೀನ್ ಅವರನ್ನು ಪೂರ್ಣ ಪ್ರಮಾಣದ ನಿರ್ದೇಶಕರನ್ನಾಗಿ ನಿಯೋಜಿಸಿ ಕ್ಯಾಬಿನೆಟ್ ನೇಮಕಾತಿ ಸಮಿತಿಯು ಬುಧವಾರ ಆದೇಶಿಸಿದೆ.

ಬಿಹಾರ ಮೂಲದ ರಾಹುಲ್ ನವೀನ್, 1993 ತಂಡದ ಭಾರತೀಯ ಆದಾಯ ಸೇವೆ (ಐಆರ್‌ಎಸ್) ಅಧಿಕಾರಿಯಾಗಿದ್ದಾರೆ. ಆದಾಯ ತೆರಿಗೆ ಕೇಡರ್‌ಗೆ ಸೇರಿದ ಇವರನ್ನು ಜಾರಿ ನಿರ್ದೇಶನಾಲಯದ ನಿರ್ದೇಶಕ ಹುದ್ದೆಗೆ ಎರಡು ವರ್ಷಗಳಿಗೆ ನೇಮಿಸಲಾಗಿದೆ.

ಜಾರಿ ನಿರ್ದೇಶನಾಲಯದ ನಿರ್ದೇಶಕ ಹುದ್ದೆಯು ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ಸಮಾನಾಂತರವಾಗಿದೆ. 57 ವರ್ಷದ ರಾಹುಲ್ ನವೀನ್ ಅವರು ಕಳೆದ ಡಿಸೆಂಬರ್‌ನಲ್ಲಿ ಈ ಹುದ್ದೆಗೆ ಬಡ್ತಿ ಪಡೆದಿದ್ದರು.

2019ರಲ್ಲಿ ವಿಶೇಷ ನಿರ್ದೇಶಕ ಹುದ್ದೆಗೆ ರಾಹುಲ್ ಅವರನ್ನು ನಿಯೋಜಿಸಲಾಗಿತ್ತು. ಐಐಟಿ ಕಾನ್ಪುರದಿಂದ ಬಿ.ಟೆಕ್ ಹಾಗೂ ಎಂ.ಟೆಕ್ ಪದವಿ ಪಡೆದಿರುವ ಇವರು ಮೆಲ್ಬರ್ನ್‌ನ ಸ್ವಿನ್‌ಬೂರ್ನ್ ತಾಂತ್ರಿಕ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದಿದ್ದಾರೆ.

ಜಾರಿ ನಿರ್ದೇಶನಾಲಯದ ಹಿಂದಿನ ನಿರ್ದೇಶಕ ಸಂಜಯ್ ಮಿಶ್ರಾ ಅವರ ಅವಧಿ ಸೆ. 15ಕ್ಕೆ ಕೊನೆಗೊಂಡಿತ್ತು. ಅಲ್ಲಿಂದ ರಾಹುಲ್ ಅವರು ಹಂಗಾಮಿ ನಿರ್ದೇಶಕರಾಗಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಬಂಧನದಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.