ನವದೆಹಲಿ: ಮದ್ರಾಸ್ ಐಐಟಿ 2023–24ನೇ ಸಾಲಿನಲ್ಲಿ ಹಳೆಯ ವಿದ್ಯಾರ್ಥಿಗಳು, ಕೈಗಾರಿಕೆಗಳು ಮತ್ತು ದಾನಿಗಳಿಂದ ₹513 ಕೋಟಿ ದೇಣಿಗೆ ಪಡೆದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.

ಜೊತೆಗೆ ಹಳೆಯ ವಿದ್ಯಾರ್ಥಿಗಳು ಮತ್ತು ಕೈಗಾರಿಕೋದ್ಯಮಿಗಳು ಇನ್ನೂ ₹717 ಕೋಟಿ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದೂ ತಿಳಿಸಿದ್ದಾರೆ.

ಸತತ ಎರಡನೇ ಬಾರಿಗೆ ಐಐಟಿಯು ಆರ್ಥಿಕ ವರ್ಷವೊಂದರಲ್ಲಿ ದಾಖಲೆಯ ದೇಣಿಗೆ ಪಡೆದಿದೆ.

2022–23ನೇ ಸಾಲಿನಲ್ಲಿ ಐಐಟಿಯು ₹218 ಕೋಟಿ ದೇಣಿಗೆ ಸ್ವೀಕರಿಸಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಶೇ 135ರಷ್ಟು ಹೆಚ್ಚು ದೇಣಿಗೆ ಪಡೆದಿದೆ.

ಸ್ವೀಕರಿಸಿದ ದೇಣಿಗೆಯನ್ನು ತಾಂತ್ರಿಕ ಸಂಶೋಧನೆ ಮತ್ತು ಅಭಿವೃದ್ಧಿಗೆ ಬಳಸಲಾಗುತ್ತಿದೆ. ಹಾಗೆಯೇ ಅರ್ಹ ವಿದ್ಯಾರ್ಥಿಗಳನ್ನು ಬೆಂಬಲಿಸಲು, ಅವರಿಗೆ ವಿದ್ಯಾರ್ಥಿವೇತನ ನೀಡಲು ಬಳಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.