ನವದೆಹಲಿ: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮದ್ರಾಸ್ ಅಗ್ರಸ್ಥಾನ ಪಡೆದುಕೊಂಡಿದೆ.

ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್ಬಿಎ) ಹಾಗೂ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ ಸಮಿತಿ (ಎನ್ಐಆರ್ಎಫ್) ನಡೆಸಿದ ಸಮೀಕ್ಷೆಯಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಹಾಗೂ ಐಐಟಿ ಬಾಂಬೆ ಕ್ರಮವಾಗಿ 2 ಹಾಗೂ 3ನೇ ಸ್ಥಾನ ಪಡೆದಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಹೇಳಿದ್ದಾರೆ.

ಎನ್ಐಆರ್ಎಫ್ ರ್ಯಾಂಕ್ ಅನ್ನು ಸತತ 6ನೇ ಬಾರಿಗೆ ಐಐಟಿ ಮದ್ರಾಸ್ ತನ್ನ ಮುಡಿಗೇರಿಸಿಕೊಂಡಿದೆ. ಕಳೆದ ಒಂಭತ್ತು ವರ್ಷಗಳಿಂದ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜು ಎಂಬ ಶ್ರೇಯಕ್ಕೂ ಈ ಸಂಸ್ಥೆ ಪಾತ್ರವಾಗಿದೆ.

ಮ್ಯಾನೇಜ್ಮೆಂಟ್ ಕಾಲೇಜುಗಳ ವಿಭಾಗದಲ್ಲಿ ಐಐಎಂ ಅಹಮದಾಬಾದ್, ಬೆಂಗಳೂರು ಮತ್ತು ಕಲ್ಕತ್ತ ಅಗ್ರ ಐದು ಸ್ಥಾನದಲ್ಲಿವೆ.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು ದೇಶದಲ್ಲೇ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಶ್ರೇಯಕ್ಕೆ ಪಾತ್ರವಾಗಿದೆ. ಇದರ ನಂತರದ ಸ್ಥಾನದಲ್ಲಿ ದೆಹಲಿಯ ನೆಹರೂ ವಿಶ್ವವಿದ್ಯಾಲಯ ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯಗಳು ಸ್ಥಾನ ಪಡೆದಿವೆ.

ದೇಶದಲ್ಲೇ ಅತ್ಯುತ್ತಮ ಕಾಲೇಜು ಎಂಬ ಕೀರ್ತಿಗೆ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜು ಭಾಜನವಾಗಿದೆ. ನಂತರದ ಸ್ಥಾನದಲ್ಲಿ ಮಿರಾಂಡಾ ಹೌಸ್ ಕಾಲೇಜು ಹಾಗೂ ಸೇಂಟ್ ಸ್ಟೀಫನ್ಸ್ ಕಾಲೇಜು ಇವೆ.

ಒಟ್ಟು 13 ವಿಭಾಗಗಳಲ್ಲಿ ಎನ್ಐಆರ್ಎಫ್ ರ್ಯಾಂಕಿಂಗ್ ಪ್ರಕಟಿಸಿದೆ. ವಿಶ್ವವಿದ್ಯಾಲಯ, ಕಾಲೇಜುಗಳು, ಸಂಶೋಧನಾ ಸಂಸ್ಥೆಗಳು, ಎಂಜಿನಿಯರಿಂಗ್, ಮ್ಯಾನೇಜ್ಮೆಂಟ್, ಔಷಧ, ವೈದ್ಯಕೀಯ, ದಂತ ವೈದ್ಯಕೀಯ, ಕಾನೂನು, ವಾಸ್ತುವಿನ್ಯಾಸ ಹಾಗೂ ಪ್ಲಾನಿಂಗ್, ಕೃಷಿ ಹಾಗೂ ನಾವೀನ್ಯತೆ ವಿಭಾಗದ ಶಿಕ್ಷಣ ಸಂಸ್ಥೆಗಳನ್ನು ಪರಿಗಣಿಸಲಾಗಿತ್ತು.

2015ರ ಸೆ. 29ರಂದು ಎನ್ಐಆರ್ಎಫ್ ಅಸ್ತಿತ್ವಕ್ಕೆ ಬಂದಿದ್ದು, ಇದಕ್ಕೆ ಶಿಕ್ಷಣ ಸಚಿವಾಲಯದ ಮಾನ್ಯತೆ ದೊರೆತಿದೆ. ಸಂಸ್ಥೆಯ ಮಾನದಂಡ ಪ್ರಕಾರ ದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳ ಗುಣಮಟ್ಟನ್ನು ಅಳೆದು ಅದರ ವರದಿ ಪ್ರಕಟಿಸುತ್ತದೆ. ಈ ವರದಿಗೆ ದೇಶದ 10,885 ಶಿಕ್ಷಣ ಸಂಸ್ಥೆಗಳನ್ನು ಪರಿಗಣಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.