ನವದೆಹಲಿ: 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಸಂಸದ ಸ್ಥಾನದಿಂದಲೂ ಅನರ್ಹ ಹೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.

‘ಎಲ್ಲಾ ಕಳ್ಳರ ಉಪನಾಮ ‘ಮೋದಿ‘ ಎಂದೇ ಏಕಿರುತ್ತದೆ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ವ್ಯಂಗ್ಯವಾಡಿದ್ದರು. ಈ ಕುರಿತು ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಾಗಿತ್ತು. ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿತ್ತು. 2023ರ ಮಾರ್ಚ್ 23ರಿಂದ ಅನ್ವಯವಾಗುವಂತೆ ಲೋಕಸಭಾ ಸದಸ್ಯತ್ವದಿಂದಲೂ ಅವರು ಅನರ್ಹಗೊಂಡಿದ್ದರು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ರಾಹುಲ್‌ಗೆ ಅಲ್ಲಿ ಹಿನ್ನೆಡೆಯಾಗಿತ್ತು. ನಂತರ ಸುಪ್ರೀಂ ಕೋರ್ಟ್‌ನಲ್ಲಿ ಅವರು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ: ಮುಂದೇನು?

ದೆಹಲಿ ವಿದ್ಯುತ್ ನಿಯಂತ್ರಣ ಆಯೋಗ (ಡಿಇಆರ್‌ಸಿ) ಮುಖ್ಯಸ್ಥರ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಅರ್ಜಿಯ ವಿಚಾರಣೆಯೂ ಇಂದು ನಡೆಯಲಿದೆ.

ಜ್ಞಾನವ್ಯಾಪಿ ಮಸೀದಿ ಆವರಣದಲ್ಲಿ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಆರಂಭಿಸಿರುವ ವೈಜ್ಞಾನಿಕ ಸರ್ವೆಗೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೆಝಾಮಿಯಾ ಮಸ್ಜಿದ್ ಸಮಿತಿಯು ಗುರುವಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಶುಕ್ರವಾರ ನಡೆಯಲಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಇಂದು: ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

ಹಣ ದುರುಪಯೋಗ ಪ್ರಕರಣದಲ್ಲಿ ಯೂನಿಟೆಕ್ ಪ್ರಮೋಟರ್‌ನ ಸಂಜಯ ಚಂದ್ರ ಅವರ ಪತ್ನಿ ಪ್ರೀತಿ ಚಂದ್ರ ಅವರಿಗೆ ದೆಹಲಿ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ)ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಳ್ಳಲಿದೆ.

ಕಲ್ಲಿದ್ದಲ್ಲು ಹಗರಣ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಆರೋಪಿ ಎಂದು ಪರಿಗಣಿಸಿ ನೀಡಿದ್ದ ಸಮನ್ಸ್ ಪ್ರಶ್ನಿಸಿ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು 2015ರಲ್ಲಿ ಸಲ್ಲಿಸಿದ್ದ ಮನವಿಯ ವಿಚಾರಣೆ ಶುಕ್ರವಾರ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.