ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಆದಿಯೋಗಿ ಶಿವ ಪ್ರತಿಮೆ ಬಳಿ ನಡೆದ ಯೋಗಾಸನ ಕಾರ್ಯಕ್ರಮದಲ್ಲಿ ಮಕ್ಕಳು ಪಾಲ್ಗೊಂಡಿದ್ದರು –ಪಿಟಿಐ ಚಿತ್ರ
ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಹಂಗೇರಿ ರಾಜಧಾನಿ ಬುಡಾಪೆಸ್ಟ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರು –ಪಿಟಿಐ ಚಿತ್ರ
10ನೇ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಕಾಶ್ಮೀರದ ಶ್ರೀನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಾಸನ ಪ್ರದರ್ಶಿಸಿದರು –ಪಿಟಿಐ ಚಿತ್ರ
ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಸ್ವಾಸ್ಥ್ಯಕ್ಕೆ ಇರುವ ದಾರಿಯೇ ಯೋಗ. ಇದನ್ನು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳೋಣ
- ದ್ರೌಪದಿ ಮುರ್ಮು ರಾಷ್ಟ್ರಪತಿಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಶುಕ್ರವಾರ ರಾಜ ಭವನದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಹಾಗೂ ಇತರರು ಪಾಲ್ಗೊಂಡಿದ್ದರು –ಪಿಟಿಐ ಚಿತ್ರ
10ನೇ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಕಾಶ್ಮೀರದ ಶ್ರೀನಗರದಲ್ಲಿ ಶುಕ್ರವಾರ ಯೋಗ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚಿತ್ರ ತೆಗೆಸಿಕೊಂಡರು –ಎಎಫ್‌ಪಿ ಚಿತ್ರ
ವಿದೇಶಗಳಲ್ಲಿಯೂ ‘ಯೋಗ’ ದರ್ಶನ
ವಿವಿಧ ದೇಶಗಳಲ್ಲಿರುವ ಭಾರತದ ರಾಯಭಾರ ಕಚೇರಿಗಳು ಹಾಗೂ ಕಾನ್ಸುಲೇಟ್ ಜನರಲ್ ಕಚೇರಿಗಳಲ್ಲಿ ಶುಕ್ರವಾರ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನ್ಯೂಯಾರ್ಕ್‌ನಲ್ಲಿ ‘ಟೈಮ್ಸ್ ಸ್ಕ್ವೇರ್ ಅಲಯನ್ಸ್’ ಸಹಯೋಗದಲ್ಲಿ ಭಾರತೀಯ ಕಾನ್ಸುಲೇಟ್ ಕಚೇರಿಯು ಟೈಮ್ಸ್ ಸ್ಕ್ವೇರ್‌ನಲ್ಲಿ ಯೋಗಾಸನ ಪ್ರದರ್ಶನ ಹಮ್ಮಿಕೊಂಡಿತ್ತು. ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿದ್ದರು. ಇಸ್ರೇಲ್‌ನ ಟೆಲ್ ಅವೀವ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ 300ಕ್ಖೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಸಿಂಗಪುರ ಶ್ರೀಲಂಕಾ ಫ್ರಾನ್ಸ್ ಬ್ರಿಟನ್ ಮಲೇಷ್ಯಾ ಇಂಡೋನೆಷ್ಯಾ ಕುವೈತ್ ಇಟಲಿ ಸೇರಿದಂತೆ ವಿವಿಧ ದೇಶಗಳಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು.