ಚೆನ್ನೈ: ತಮಿಳುನಾಡು ಮೂಲದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ಗೆ ಸೇರಿದ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಸೋಮವಾರ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಚೆನ್ನೈ, ಕೊಯಮತ್ತೂರು ಮತ್ತು ತಿರುಚಿರಾಪಳ್ಳಿ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ನಗರದ ಡಿಎಂಕೆ ಶಾಸಕರೊಬ್ಬರ ಮೇಲೂ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಕಾರಣಕ್ಕೆ ಅವರ ಬೆಂಬಲಿಗರು ತನಿಖಾ ಸಂಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದರು.

ಕಂಪನಿಯು ಆಡಳಿತಾರೂಢ ಡಿಎಂಕೆಯ ‘ಮೊದಲ ಕುಟುಂಬ’ದೊಂದಿಗೆ ಸಂಪರ್ಕ ಹೊಂದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಸೇರಿದಂತೆ ಕೆಲವರು ಆರೋಪಿಸಿದ್ದಾರೆ.

ರಿಯಲ್ ಎಸ್ಟೇಟ್ ಸಂಸ್ಥೆಯ ಕರ್ನಾಟಕ ಮತ್ತು ತೆಲಂಗಾಣ ಕಚೇರಿಗಳಲ್ಲಿಯೂ ಶೋಧ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ದಾಳಿಗೆ ಸಂಬಂಧಿಸಿದಂತೆ ಜಿ ಸ್ಕ್ವೇರ್ ಪ್ರತಿಕ್ರಿಯಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.