ನವದೆಹಲಿ: ದೇಶದಾದ್ಯಂತ ಕೋವಿಡ್ ತಡೆಗೆ ನೀಡಲಾಗುತ್ತಿರುವ ಲಸಿಕೆ ಪ್ರಮಾಣ 8 ಕೋಟಿ ಡೋಸ್ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಕರ್ನಾಟಕ, ಮಧ್ಯಪ್ರದೇಶ ಮತ್ತು ಕೇರಳ ಸೇರಿ ಈ 8 ರಾಜ್ಯಗಳಲ್ಲಿ ಬೆಳಗ್ಗೆವರೆಗೆ ಶೇ .60 ರಷ್ಟು ಲಸಿಕೆ ವಿತರಣೆಯಾಗಿದೆ.

ಇದೇವೇಳೆ, ಮಹಾರಾಷ್ಟ್ರ, ಛತ್ತೀಸ್ಗಡ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ತಮಿಳುನಾಡು, ಮಧ್ಯಪ್ರದೇಶ ಮತ್ತು ಪಂಜಾಬ್ ರಾಜ್ಯಗಳಲ್ಲಿ ದೈನಂದಿನ ಕೋವಿಡ್ -19 ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡಿದ್ದು, 24 ಗಂಟೆಗಳ ಅವಧಿಯ 1,03,558 ಹೊಸ ಪ್ರಕರಣಗಳ ಪೈಕಿ ಶೇ. 81.90 ರಷ್ಟು ಈ ರಾಜ್ಯಗಳಿಂದಲೇ ವರದಿಯಾಗಿವೆ.

ಈಗ ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,41,830 ಕ್ಕೆ ತಲುಪಿದೆ. ಇದು ದೇಶದ ಒಟ್ಟು ಸೋಂಕಿತರಲ್ಲಿ ಶೇ. 5.89 ರಷ್ಟಿದೆ ಎಂದು ಡೇಟಾ ತಿಳಿಸಿದೆ.

ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಮಹಾರಾಷ್ಟ್ರ, ಕರ್ನಾಟಕ, ಛತ್ತೀಸ್ಗಡ, ಕೇರಳ ಮತ್ತು ಪಂಜಾಬ್ ರಾಜ್ಯಗಳಲ್ಲಿ ಶೇ. 75.88 ರಷ್ಟಿದೆ.

ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಮಹಾರಾಷ್ಟ್ರ ಒಂದರಲ್ಲೇ ಶೇ. 58.23 ರಷ್ಟು ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರ, ಛತ್ತೀಸ್ಗಡ, ಪಂಜಾಬ್, ಕರ್ನಾಟಕ, ದೆಹಲಿ, ತಮಿಳುನಾಡು, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಕೇರಳ ಸೇರಿ ಈ 12 ರಾಜ್ಯಗಳಲ್ಲಿ ದೈನಂದಿನ ಹೊಸ ಪ್ರಕರಣಗಳಲ್ಲಿ ಭಾರೀ ಏರಿಕೆಯಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.