ಭೋಪಾಲ್: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಮಿತ್ರಪಕ್ಷಗಳಾದ ಎಎಎಸ್ಜೆಯು, ಜೆಡಿಯು ಮತ್ತು ಎಲ್ಜೆಪಿ ನಡುವೆ ಸೀಟು ಹಂಚಿಕೆ ಪೂರ್ಣಗೊಂಡಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ.

ವಿರೋಧ ಪಕ್ಷದ ಮೈತ್ರಿಕೂಟ ‘ಇಂಡಿಯಾ’ ತನ್ನ ಸ್ವಾರ್ಥಕ್ಕಾಗಿ ಅಸ್ವಾಭಾವಿಕ ಮೈತ್ರಿ ಮಾಡಿಕೊಂಡಿದೆ ಎಂದು ಅವರು ಟೀಕಿಸಿದ್ದಾರೆ.

ಸೀಟು ಹಂಚಿಕೆಗೆ ಸಂಬಂಧಿಸಿ ವಿಪಕ್ಷಗಳ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಚೌಹಾಣ್, ‘ಅವರದು ಸ್ವಾಭಾವಿಕವಾದ ಮೈತ್ರಿಯಲ್ಲ. ಇದು ಸೈದ್ಧಾಂತಿಕ ಒಮ್ಮತವಿಲ್ಲದೆ, ಸಾಮಾನ್ಯ ಹಿತಾಸಕ್ತಿ ಹೊಂದಿರುವ ಜನರ ಗುಂಪು. ಅವರು ಮೋದಿಯನ್ನು ವಿರೋಧಿಸುವ ಏಕೈಕ ಕಾರ್ಯಸೂಚಿ ಇಟ್ಟುಕೊಂಡು ಒಗ್ಗೂಡಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.