ಐಜ್ವಾಲ್: ‘ಇಂಡಿಯಾ’ ಮೈತ್ರಿಕೂಟವು ದೇಶದ ಶೇ 60ರಷ್ಟು ಭಾಗವನ್ನು ಪ್ರತಿನಿಧಿಸುತ್ತದೆ. ಇದು ಬಿಜೆಪಿಗಿಂತ ಹೆಚ್ಚು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಇಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಮಿಜೋರಾಂನ ಆಡಳಿತಾರೂಢ ಎಂಎನ್‌ಎಫ್ ಹಾಗೂ ವಿರೋಧ ಪಕ್ಷ ಜೆಡ್‌ಪಿಎಂ ಅನ್ನು ತನ್ನ ಹಿಡಿತ ಸಾಧಿಸಿಕೊಳ್ಳಲು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.

ಮಿಜೋರಾಂನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾಸಿಕ ₹2000 ವೃದ್ಧಾಪ್ಯ ವೇತನ, ₹750ಕ್ಕೆ ಗ್ಯಾಸ್ ಸಿಲಿಂಡರ್ ಹಾಗೂ ಉದ್ಯಮಿಗಳಿಗೆ ಬೆಂಬಲ ನೀಡುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ನವೆಂಬರ್ 7 ರಂದು ಮಿಜೊರಾಂ ವಿಧಾನಸಭೆಗೆ ಮತದಾನ ನಡೆಯಲಿದೆ.

ಪ್ರತಿಪಕ್ಷಗಳ ಒಕ್ಕೂಟವು ತನ್ನ ಮೌಲ್ಯಗಳು, ಸಾಂವಿಧಾನಿಕ ಚೌಕಟ್ಟು ಮತ್ತು ಧರ್ಮ ಅಥವಾ ಸಂಸ್ಕೃತಿಯನ್ನು ಲೆಕ್ಕಿಸದೆ ಜನರ ಸ್ವಾತಂತ್ರ್ಯವನ್ನು ರಕ್ಷಿಸುವ ಮೂಲಕ ‘ಭಾರತದ ಕಲ್ಪನೆ’ಯನ್ನು ರಕ್ಷಿಸುತ್ತದೆ ಎಂದು ಹೇಳಿದರು.

ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ದೇಶದ ಬಗ್ಗೆ ಅವರ ಹಾಗೂ ನಮ್ಮ ದೂರದೃಷ್ಟಿ ಭಿನ್ನವಾಗಿದೆ. ನಾವು ಆಧಿಕಾರ ವಿಕೇಂದ್ರಿಕರಣದಲ್ಲಿ ನಂಬಿಕೆ ಹೊಂದಿದ್ದೇವೆ. ಎಲ್ಲಾ ನಿರ್ಣಯಗಳೂ ದೆಹಲಿಯಲ್ಲಿಯೇ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನಂಬಿದೆ’ ಎಂದು ಹೇಳಿದರು.

ಅಲ್ಲದೆ ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ, ಛತ್ತೀಸ್‌ಗಢ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.