ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೊಕೊ ಪೈಲಟ್‌ಗಳ ಪರ ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟ ಧ್ವನಿ ಎತ್ತಲಿದೆ: ರಾಹುಲ್

Published : 7 ಜುಲೈ 2024, 12:34 IST
Last Updated : 7 ಜುಲೈ 2024, 12:34 IST
ಫಾಲೋ ಮಾಡಿ
Comments

ನವದೆಹಲಿ: ಲೊಕೊ ಪೈಲಟ್‌ಗಳ ಹಕ್ಕುಗಳು ಹಾಗೂ ಅವರ ಸಮಸ್ಯೆಗಳ ಪರ ಸಂಸತ್ತಿನಲ್ಲಿ ’ಇಂಡಿಯಾ’ ಮೈತ್ರಿಕೂಟ ಧ್ವನಿ ಎತ್ತಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭಾನುವಾರ ಹೇಳಿದ್ದಾರೆ.

ಇತ್ತೀಚೆಗೆ ನವದೆಹಲಿ ರೈಲು ನಿಲ್ದಾಣದಲ್ಲಿ ಲೊಕೊ ಪೈಲಟ್‌ಗಳ ಜತೆ ಸಂವಾದ ನಡೆಸಿದ್ದರು. ಆ ವಿಡಿಯೊವನ್ನು ’ಎಕ್ಸ್‌’ನಲ್ಲಿ ಹಂಚಿಕೊಂಡಿರುವ ರಾಹುಲ್‌ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲೊಕೊ ಪೈಲಟ್ ಗಳ ಜೀವನದ ರೈಲು ಸಂಪೂರ್ಣ ಹಳಿ ತಪ್ಪಿದೆ. ದಿನಕ್ಕೆ 16 ತಾಸು ಕೆಲಸ ಮಾಡುವ ಇವರಿಗೆ ಕನಿಷ್ಠ ಮೂಲ ಸೌಕರ್ಯಗಳನ್ನೂ ಒದಗಿಸಿಲ್ಲ. ಲೊಕೊ ಪೈಲಟ್‌ಗಳ ಕೆಲಸದ ಅವಧಿಯೂ ಹೆಚ್ಚಾಗಿದ್ದು, ಅವರಿಗೆ ಸರಿಯಾದ ಸಮಯಕ್ಕೆ ರಜೆಯೂ ಸಿಗುತ್ತಿಲ್ಲ. ಈ ಎಲ್ಲಾ ಸಮಸ್ಯೆಗಳಿಂದಾಗಿ ಅವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ನಲುಗಿ ಹೋಗಿದ್ದಾರೆ ಎಂದು ರಾಹುಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಲೊಕೊ ಪೈಲಟ್‌ಗಳು ತಮ್ಮ ಜೀವನ್ನು ಪಾಣಕ್ಕಿಟ್ಟು ಕೆಲಸ ಮಾಡುತ್ತಾರೆ. ಈ ಸಣ್ಣ ವಿಡಿಯೊದಲ್ಲಿ ಅವರು ಅನುಭವಿಸುತ್ತಿರುವ ನೋವುಗಳ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೊದಲ್ಲಿ ಅವರ ಸಮಸ್ಯೆಗಳನ್ನು ಆಲಿಸಬಹುದು ಎಂದು ಬರೆದುಕೊಂಡಿದ್ದಾರೆ.

ರಾಹುಲ್‌ ಗಾಂಧಿಯವರು ಶುಕ್ರವಾರ ಲೊಕೊ ಪೈಲಟ್‌ಗಳನ್ನು ಭೇಟಿಯಾಗಿದ್ದರು. ಈ ವೇಳೆ ರಾಹುಲ್‌ ಬಳಿ ತಮ್ಮ ವಿಶ್ರಾಂತಿ ರಹಿತ ಕೆಲಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಮ್ಮ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಗಮನ ಸೆಳೆಯಲಿದ್ದೇವೆ ಎಂದು ರಾಹುಲ್ ಆಶ್ವಾಸನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT