ನವದೆಹಲಿ: ಪೂರ್ವ ಲಡಾಖ್‌ಗೆ ಹೊಂದಿಕೊಂಡಿರುವ ಗಡಿ ಪ್ರದೇಶದಲ್ಲಿ ಚೀನಾ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿರುವುದು ಸೇರಿದಂತೆ ಗಡಿಯುದ್ದಕ್ಕೂ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಭಾರತವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದಾರೆ.

ಲಡಾಖ್‌ಗೆ ಹೊಂದಿಕೊಂಡಿರುವ ತನ್ನ ಗಡಿಯಲ್ಲಿ ಚೀನಾ ರಕ್ಷಣಾ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿದೆ ಎಂದು ಅಮೆರಿಕದ ಸೇನೆಯ ಪೆಸಿಫಿಕ್ ಕಮಾಂಡ್‌ನ ಜನರಲ್ ಚಾರ್ಲ್ಸ್ ಎ ಫ್ಲಿನ್ ನೀಡಿರುವ ಎಚ್ಚರಿಕೆಗೆ ಪ್ರತಿಕ್ರಿಯಿಸಿ ಅರಿಂದಮ್ ಅವರು ಈ ಹೇಳಿಕೆ ನೀಡಿದ್ದಾರೆ.

ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ಕಾಪಾಡಲು ಸರ್ಕಾರವು ಬದ್ಧವಾಗಿದೆ ಮತ್ತು ಇದಕ್ಕಾಗಿ ಸಮರ್ಪಕ ಮತ್ತು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದೂ ಹೇಳಿದ್ದಾರೆ.

ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಭಾರತವು ಇತ್ತೀಚೆಗಿನ ವರ್ಷಗಳಲ್ಲಿ ಕ್ರಮ ಕೈಗೊಂಡಿದೆ ಎಂದೂ ಹೇಳಿದ್ದಾರೆ. ಲಡಾಖ್ ಗಡಿ ಬಿಕ್ಕಟ್ಟಿನ ಕುರಿತು ಚೀನಾದ ಜೊತೆ ಮಾತುಕತೆ ನಡೆಸಲು ರಾಜತಾಂತ್ರಿಕವಾಗಿಯೂ ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.