ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಪ್ರಕರಣದಲ್ಲಿ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ದೇಶದ ವಿರುದ್ಧ ಇಸ್ಲಾಮಿಕ್ ಸಹಕಾರ ಸಂಘಟನೆಯ ಶಾಶ್ವತ ಮಾನವ ಹಕ್ಕುಗಳ ಆಯೋಗ (ಒಐಸಿ–ಐಪಿಎಚ್ಆರ್ಸಿ) ಮಾಡಿರುವ ಟೀಕೆ ಒಪ್ಪಲಾಗದು ಎಂದು ಭಾರತ ತಿರುಗೇಟು ನೀಡಿದೆ.

‘ಭಯೋತ್ಪಾದನೆ ವಿರುದ್ಧ ಇಡೀ ವಿಶ್ವವೇ ಹೋರಾಡುತ್ತಿದೆ. ಇಂಥ ಸನ್ನಿವೇಶದಲ್ಲಿ, ಭಾರತದ ವಿರುದ್ಧ ಆಯೋಗ ಮಾಡಿರುವ ಟೀಕೆಗಳನ್ನು ಇಸ್ಲಾಮಿಕ್ ಸಹಕಾರ ಸಂಘಟನೆಯು (ಒಐಸಿ) ಯಾವ ರೀತಿಯಲ್ಲೂ ಸಮರ್ಥನೆ ಮಾಡಿಕೊಳ್ಳಬಾರದು’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

‘ಯಾಸಿನ್ ಮಲಿಕ್ ನಡೆಸಿದ್ದ ಭಯೋತ್ಪಾದನಾ ಕೃತ್ಯಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಎನ್ಐಎ ಕೋರ್ಟ್ಗೆ ಸಲ್ಲಿಸಲಾಗಿತ್ತು. ಈಗ, ಒಐಸಿ–ಐಪಿಎಚ್ಆರ್ಸಿ ನೀಡಿರುವ ಹೇಳಿಕೆಗಳು ಮಲಿಕ್ನ ಕೃತ್ಯಗಳಿಗೆ ಸೂಚ್ಯವಾಗಿ ಬೆಂಬಲ ನೀಡುವಂತಿವೆ’ ಎಂದಿದ್ದಾರೆ.

ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಯಾಸಿನ್ ಮಲಿಕ್ಗೆ ಎನ್ಐಎ ವಿಶೇಷ ಕೋರ್ಟ್ ಇತ್ತೀಚೆಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.